

ಮುದ್ದೇಬಿಹಾಳ: ಶಿಕ್ಷಣದಿಂದ ಮಾತ್ರ ಸಮಾಜ ಪ್ರಗತಿ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ ಸಮಾಜ ಬಾಂಧವರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಶಾಸಕ ಶಾಸಕ ಸಿ.ಎಸ್. ನಾಡಗೌಡ ಸಲಹೆ ನೀಡಿದರು.
ತಾಲೂಕಿನ ತಂಗಡಗಿ ಗ್ರಾಮದ ಹಡಪದ ಅಪ್ಪಣ್ಣ ಗುರುಪೀಠದಲ್ಲಿ ಭಾನುವಾರ ಜರುಗಿದ ಲಿಂ. ಬಸವಪ್ರಿಯ ಹಡಪದ ಅಪ್ಪಣ್ಣ ಸ್ವಾಮೀಜಿ 17ನೇ ಪುಣ್ಯ ಸ್ಮರಣೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯುವಕರು ದುಶ್ಚಟಗಳ ದಾಸರಾಗಿ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಪ್ರೀತಿ, ವಿಶ್ವಾಸ, ನಂಬಿಕೆ ಕಡಿಮೆಯಾಗುತ್ತಿದೆ. ಕೌಟುಂಬಿಕ ಕಲಹಗಳು ಹೆಚ್ಚಾಗಿ ಕಂಡು ಬರುತ್ತಿವೆ. ಎಲ್ಲರಲ್ಲೂ ಸ್ವಾರ್ಥ ಭಾವನೆ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ತಂಗಡಗಿ ಗ್ರಾಮದಲ್ಲಿ ಹಡಪದ ಅಪ್ಪಣ್ಣವರ ಕುರುಹುಗಳಿದ್ದು, ಈ ಸ್ಥಳವನ್ನು ಅಭಿವೃದ್ಧಿ ಪಡಿಸಲು ವಿಶೇಷ ಅನುದಾನ ಕೊಡಬೇಕು ಎಂದು ಸಚಿವ ಶಿವರಾಜ ತಂಗಡಿಯವರಲ್ಲಿ ಮನವಿ ಮಾಡಿದ್ದೇನೆ. ಮಠದ ಅಭಿವೃದ್ಧಿಗೆ ಶಾಸಕರ ವಿಶೇಷ ನಿಧಿಯಲ್ಲಿ 10 ಲ ರೂ. ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು.
ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಮಾತನಾಡಿ, ಸಣ್ಣ ಸಮಾಜದವರನ್ನು ತುಳಿಯುವ ಕಾರ್ಯ ನಡೆಯುತ್ತಿದೆ. ಹಾಗಂತ ಯಾರೂ ಕೈಕಟ್ಟಿಕುಳಿತುಕೊಳ್ಳಬಾರದು. ಸಣ್ಣ ಸಮಾಜದವರನ್ನು ಮುಖ್ಯವಾಹಿನಿಗೆ ತರುವ ಕೆಲಸ ನಡೆಯಬೇಕು ಎಂದರು.
ಹಡಪದ ಅಪ್ಪಣ್ಣ ಸಮಾಜದ ಪೀಠಾಧಿಪತಿ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ ಮಾತನಾಡಿ, ತಂಗಡಗಿಯಲ್ಲಿ ಹಡಪದ ಅಪ್ಪಣ್ಣನವರ ಮಠದ ಏಳಿಗೆಗೆ ಶಾಸಕರು ಸಾಕಷ್ಟು ಶ್ರಮಪಟ್ಟಿದ್ದಾರೆ. ಅವರು ವಿಶೇಷ ಕಾಳಜಿ ವಹಿಸಿದ್ದರಿಂದ ಇಂದು ಮಠದ ಕಟ್ಟಡ ಕಾಣಬಹುದಾಗಿದೆ ಎಂದರು.
ಕಾಂಗ್ರೆಸ್ ಮುಖಂಡ ಸಿ.ಬಿ. ಅಸ್ಕಿ, ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ ಡಾ. ಪ್ರಭುಗೌಡ ಲಿಂಗದಳ್ಳಿ ಮಾತನಾಡಿದರು. ಶ್ರೀ ಗುರುಮಹಾಂತ ಸ್ವಾಮೀಜಿ, ಚಿತ್ರದುರ್ಗದ ಮಾಚಿದೇವ ಸಂಸ್ಥಾನ ಮಠದ ಬಸವ ಮಾಚಿದೇವ ಸ್ವಾಮೀಜಿ, ಟ್ರಸ್ಟ್ನ ಗೌರವಾಧ್ಯ ಎಂ.ಎಸ್. ನಾವಿ, ನೌಕರರ ಸಂದ ಪ್ರಕಾಶ ಹಡಪದ, ಜಿಲ್ಲಾಧ್ಯ ವಿ.ಜಿ. ಕತ್ನಳ್ಳಿ, ನಿಂಗಪ್ಪ ನಾವಿ, ಮಹಾಂತೇಶ ಮೂಲಿಮನಿ, ನಾಗೇಶ ನಾಗೂರ, ಓಂಕಾರ ನಾವಿ, ಸೋಮನಗೌಡ ಪಾಟೀಲ ನಡಹಳ್ಳಿ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯ ಗುರು ತಾರನಾಳ ಉಪಸ್ಥಿತರಿದ್ದರು.
ಎಸ್ಎಸ್ಎಲ್ಸಿ ಪರೀೆಯಲ್ಲಿ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.