ಪ್ರಥಮ ಚಿಕಿತ್ಸೆ ಕುರಿತ ಪ್ರಾತ್ಯಕ್ಷಿಕೆ

Published on

ಕುಂದಾಪುರ: ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಟಕ ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಹಾಗೂ ಕಾಲೇಜಿನ ಜೂನಿಯರ್ ರೆಡ್‌ಕ್ರಾಸ್ ವಿಭಾಗದ ಸಹಯೋಗದೊಂದಿಗೆ ಪ್ರಥಮ ಚಿಕಿತ್ಸೆ ಕುರಿತಾದ ಪ್ರಾತ್ಯಕ್ಷಿಕೆ ಆಧಾರಿತ ವಾಹಿತಿ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.

ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ರೆಡ್‌ಕ್ರಾಸ್ ಸಂಸ್ಥೆಯ ಸದಸ್ಯೆ ಹಾಗೂ ಪ್ರಥಮ ಚಿಕಿತ್ಸಾ ತರಬೇತುದಾರೆ ಡಾ.ಸೋನಿ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು.

ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಟಕದ ಸಭಾಪತಿ ಜಯಕರ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಕಾರ್ಯಕ್ರವಾಧಿಕಾರಿ ವನಿತಾ ನಾಯ್ಕ ಸ್ವಾಗತಿಸಿದರು. ಜೂನಿಯರ್ ರೆಡ್‌ಕ್ರಾಸ್ ಟಕದ ಸಂಚಾಲಕ ರಾಜೇಶ್ ಹೆಬ್ಬಾರ್ ವಂದಿಸಿದರು. ಸ್ವಯಂ ಸೇವಕ ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net