ವರೂರು ಜೈನಮುನಿ ಭೇಟಿಯಾದ ಸಚಿವ ಸುಧಾಕರ

SUDHAKAR NEW
Published on

ಹುಬ್ಬಳ್ಳಿ : ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ ಅವರು ಮಂಗಳವಾರ ಹುಬ್ಬಳ್ಳಿ ತಾಲೂಕಿನ ವರೂರು ನವಗ್ರಹ ತೀರ್ಥಕ್ಷೇತ್ರಕ್ಕೆ ಭೇಟಿ ನೀಡಿ, ಜೈನಮುನಿ ಶ್ರೀ ಗುಣಧರನಂದಿ ಮಹಾರಾಜ ಅವರೊಂದಿಗೆ ರ್ಚಚಿಸಿದರು.

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕು ಹಿರೇಕೋಡಿಯ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ತನಿಖೆ ಕೈಗೊಂಡು, ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಮುಂದಿನ ದಿನಗಳಲ್ಲಿ ಈ ರೀತಿಯ ಕೃತ್ಯಗಳು ನಡೆಯದಂತೆ ನೋಡಿಕೊಳ್ಳಲಾಗುವುದು ಹಾಗೂ ಜೈನ ಮುನಿಗಳಿಗೆ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net