ಸಾಂಸ್ಕೃತಿಕ ಚಟುವಟಿಕೆಯಿಂದ ಪ್ರತಿಭೆ ಅನಾವರಣ

29-kle college
Published on

ಹುಬ್ಬಳ್ಳಿ: ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಭೆಯನ್ನು ಹೊರ ಜಗತ್ತಿಗೆ ಪರಿಚಯಿಸುತ್ತವೆ. ಸ್ಪರ್ಧೆಗಳನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಳ್ಳಬೇಕೇ ಹೊರತು ವೈಯಕ್ತಿಕವಾಗಿ ಅಲ್ಲ. ಸ್ಪರ್ಧಾಳುಗಳ ಪ್ರತಿಭೆಗೆ ಪ್ರಾಶಸ್ಱ ಸಿಗಬೇಕು ಎಂದು ಧಾರವಾಡ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ (ಪದವಿಪೂರ್ವ) ಕೆ.ಪಿ. ಸುರೇಶ ಹೇಳಿದರು.

ತಾಲೂಕಿನ ಕೊಟಗೊಂಡಹುಣಸಿಯ ಕೆಎಲ್​ಇ ಪ್ರೇರಣಾ ಪದವಿ ಪೂರ್ವ ಕಾಲೆೇಜಿನಲ್ಲಿ ಪಪೂ ಶಿಕ್ಷಣ ಇಲಾಖೆಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಕಾಲೇಜಿನ ಸಹಯೋಗದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಬೆಳಗಾವಿ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ (ಪಪೂ) ಶೈಕ್ಷಣಿಕ ವಿಭಾಗದ ಸಹಾಯಕ ನಿರ್ದೇಶಕ ಮೊಹ್ಮದ ಜಿಯಾವುಲ್ಲಾ ಖಾನ್ ಮಾತನಾಡಿ, ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳು ತುಂಬಾ ಮುಖ್ಯ. ನಾವು ಚೆನ್ನಾಗಿ ತಯಾರಿ ಮಾಡಿಕೊಂಡಿರುತ್ತೇವೆ. ಆದರೆ, ಅದನ್ನು ಧೈರ್ಯದಿಂದ ಪ್ರದರ್ಶಿಸಬೇಕು. ಅಂದಾಗ ಪ್ರತಿಭೆ ಅನಾವರಣಗೊಳ್ಳುತ್ತವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆಎಲ್​ಇ ಸಂಸ್ಥೆ ನಿರ್ದೇಶಕ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಶಂಕರಣ್ಣ ಮುನವಳ್ಳಿ ಮಾತನಾಡಿ, ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸುವ ಜತೆಗೆ ಅವರಲ್ಲಿರುವ ಪ್ರತಿಭೆಗಳನ್ನು ಹೊರ ಹಾಕುತ್ತವೆ. ಎಲ್ಲ ವಿದ್ಯಾರ್ಥಿಗಳಿಗೆ ವೇದಿಕೆ ಕೊಟ್ಟರೆ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯ ಎಂದರು.

ಪ್ರಾಚಾರ್ಯ ಶ್ರೀನಿವಾಸ ಲಿಕ್ಕಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಪ್ರಜ್ವಲಿಸಲು ಪ್ರತಿಭಾ ಕಾರಜಿಯಂತಹ ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿ. ವಿದ್ಯಾರ್ಥಿಗಳ ಬದುಕಿಗೆ ಬಲ ನೀಡಿ ಅವರ ಏಳಿಗೆಗೆ ಕಾರಣವಾಗುತ್ತವೆ ಎಂದರು.

ಧಾರವಾಡ ಜಿಲ್ಲೆಯ ವಿವಿಧ ಕಾಲೇಜಿನ 30 ಉಪನ್ಯಾಸಕರು ನಿರ್ಣಾಯಕರಾಗಿ ಕಾರ್ಯನಿರ್ವಹಿಸಿದರು. ಬೆಳಗಾವಿ ವಿಭಾಗದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟ, ಚಿಕ್ಕೋಡಿ, ಉತ್ತರಕನ್ನಡ, ವಿಜಯಪುರ ಜಿಲ್ಲೆಗಳಿಂದ ಅಂದಾಜು 500 ಸ್ಪರ್ಧಿಗಳು ಭಾಗವಹಿಸಿದ್ದರು.

ಪ್ರಾಚಾರ್ಯು ತೇಜಸ್ವಿನಿ ನಾರಾಯಣಕರ, ಪಪೂ ಕಾಲೇಜುಗಳ ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ ಡಿ., ಸಂಘದ ಪ್ರಧಾನ ಕಾರ್ಯದರ್ಶಿ ಸಂದೀಪ ಬೂದಿಹಾಳ, ಜಿ.ಬಿ. ತಹಶೀಲ್ದಾರ್, ರಂಗನಾಥ ರಂಗಣ್ಣವರ, ಸೈಯದ್ ಫಯಾಜ್ ಅಹ್ಮದ್, ಲಿಂಗರಾಜ ಬೆಲ್ಲದ, ಚಂದ್ರಶೇಖರ ಕುಂಬಾರ, ಪ್ರಕಾಶ ಸುಣಗಾರ, ವರಹವೆಂಕಟಗಿರಿ ಎಸ್.ಎಲ್., ರಾಜೇಶ, ಕಾಲೇಜಿನ ಸಿಬ್ಬಂದಿ ಇದ್ದರು. ಉಪನ್ಯಾಸಕ ಮಂಜುನಾಥ ಕಿತ್ತೂರ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net