

ಹುಬ್ಬಳ್ಳಿ: ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲಕುಮಾರ್, ಸಹನ ಮೂರ್ತಿ ನಿರ್ವಣದ ಕೋಮಲಕುಮಾರ್ ನಾಯಕನಾಗಿ ನಟಿಸಿರುವ ‘ಯಲಾಕುನ್ನಿ’ ಚಿತ್ರ ಅ. 25ರಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಟ ಕೋಮಲಕುಮಾರ್ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್.ಆರ್. ಪ್ರದೀಪ್ ಕಥೆ, ಚಿತ್ರಕಥೆ, ಸಾಹಿತ್ಯ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಎಂದರು.
ನಾನು ವಜ್ರಮುನಿ ಅವರ ಗೆಟಪ್ನಲ್ಲಿ ಪಾತ್ರ ಮಾಡಿದ್ದೇನೆ. ಅಲ್ಲದೆ, ಮೊದಲ ಬಾರಿಗೆ ದ್ವಿಪಾತ್ರದಲ್ಲಿ ನಟಿಸುತ್ತಿದ್ದೇನೆ. ವಜ್ರಮುನಿ ಅವರ ಮೊಮ್ಮಗ ಆಕರ್ಷ ಕೂಡ ಪಾತ್ರ ಮಾಡಿದ್ದಾರೆ. ನಿಸರ್ಗ ಅಪ್ಪಣ್ಣ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ನನ್ನ ಅಣ್ಣನ ಮಗ ಯತಿರಾಜ್, ಜಯಸಿಂಹ ಮುಸುರಿ, ಮಯೂರ್ ಪಟೇಲ್, ಸಾಧುಕೋಕಿಲ, ದತ್ತಣ್ಣ, ಮಿತ್ರ, ತಬಲ ನಾಣಿ, ಶಿವರಾಜ್ ಕೆ.ಆರ್. ಪೇಟೆ, ಮಾನಸಿ ಸುಧೀರ್, ಸುಮನ್ ನಗರಕರ್ ಹೀಗೆ ಅನೇಕರು ಚಿತ್ರದಲ್ಲಿ ನಟಿಸಿದ್ದಾರೆ. ಪ್ರೇಕ್ಷಕರು ಚಿತ್ರ ನೋಡಿ ಆಶೀರ್ವದಿಸಬೇಕು ಎಂದರು. ಶಿವಾನಂದ ಮುತ್ತಣ್ಣವರ, ಜಗದೀಶ ರಿತ್ತಿ, ಕೃಷ್ಣಾ ಚಿಕ್ಕತುಂಬಳ, ಚಂದ್ರಶೇಖರ ಗೋಕಾಕ, (ನೂಲ್ವಿ) ಇತರರಿದ್ದರು.