ಕಾಂಗ್ರೆಸ್​ನದ್ದು ರಿವರ್ಸ್​ಗೇರ್ ಸರ್ಕಾರ

XCM Basavaraj Bommayi
Published on

ಹುಬ್ಬಳ್ಳಿ : ನೂತನ ಕಾಂಗ್ರೆಸ್ ಸರ್ಕಾರ ರಿವರ್ಸ್ ​ಗೇರ್ ಸರ್ಕಾರ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ ಗ್ಯಾರಂಟಿಗಳು ಇದೀಗ ರಿವರ್ಸ್ ಹೋಗುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಜಾರಿಗೊಳಿಸಿದ್ದ ಜನಪರ ಕಾನೂನುಗಳನ್ನು ಸಹ ಕಾಂಗ್ರೆಸ್ ರಿವರ್ಸ್ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತದೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಯಾವ ರೀತಿಯ ಕೆಲಸ ಮಾಡುತ್ತದೆ ನೋಡೋಣ. ಕಾಂಗ್ರೆಸ್ ಸರ್ಕಾರದಿಂದ ಸಾರ್ವಜನಿಕರಿಗೆ ಅನ್ಯಾಯವಾದರೆ ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟಕ್ಕೆ ಸಿದ್ಧ ಎಂದು ಎಚ್ಚರಿಕೆ ನೀಡಿದರು.

ಸ್ವೇಚ್ಛಾಚಾರವಾಗಿ ಎಲ್ಲವನ್ನೂ ಬದಲಾವಣೆ ಮಾಡುತ್ತೇವೆ ಎಂಬುದು ಕಾಂಗ್ರೆಸ್​ನ ದುರಹಂಕಾರ. ಕಾಂಗ್ರೆಸ್ ತನ್ನ ವರ್ತನೆಯನ್ನು ಇದೇ ರೀತಿ ಮುಂದುವರೆಸಿದರೆ ರಾಜ್ಯದ ಜನರು ಸೂಕ್ತ ಪಾಠ ಕಲಿಸುತ್ತಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net