ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಹುಬ್ಬಳ್ಳಿಗರು

karate
Published on

ಹುಬ್ಬಳ್ಳಿ: ಶ್ರೀಲಂಕಾ ದೇಶದ ಕುರುನೇಗಾಲ್‌ನಲ್ಲಿ ಜ. 19 ಮತ್ತು 20ರಂದು ನಡೆಯಲಿರುವ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಹುಬ್ಬಳ್ಳಿ ಅಸ್ಪೈರ್ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ತರಬೇತುದಾರರು ಸೇರಿದಂತೆ 18 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ತರಬೇತುದಾರ ಪುಲಕೇಶಿ ಮಲ್ಯಾಳ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಟಾ (ಫಾರ್ಮ್‌ಗಳು) ಹಾಗೂ ಕುಮಿಟೆ(ಸ್ಪಾರಿಂಗ್) ಎರಡು ವಿಭಾಗದಲ್ಲಿ ಈ ಸ್ಪರ್ಧೆ ನಡೆಯಲಿದೆ. ಅದರಲ್ಲಿ ಸಂಸ್ಥೆಯ ನಾಲ್ವರು ತರಬೇತುದಾರರು ಹಾಗೂ ಮಹಿಳಾ ಮತ್ತು ಪುರುಷ ಕ್ರೀಡಾಪಟುಗಳು ಸೇರಿದಂತೆ ಹು-ಧಾ ಅವಳಿ ನಗರದಿಂದ (9 ರಿಂದ 50 ವಯಸ್ಸಿನೊಳಗಿನ) ಒಟ್ಟು 18 ಜನರು ಪಾಲ್ಗೊಳ್ಳಲಿದ್ದಾರೆ ಎಂದರು.
ಈಗಾಗಲೇ ಕ್ರೀಡಾಪಟುಗಳಿಗೆ ತರಬೇತಿ ನೀಡಲಾಗಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ನಮ್ಮ ಸಂಸ್ಥೆಯ ಕ್ರೀಡಾಪಟುಗಳು ಪಡೆದುಕೊಂಡಿದ್ದಾರೆ. ಶ್ರೀಲಂಕಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ತೋರುವ ಮೂಲಕ ಚಿನ್ನದ ಪದಕ ಪಡೆಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತರಬೇತುದಾರರಾದ ಆಕಾಶ ಮಲ್ಯಾಳ್, ಕಿರಣ ಹಂಜಗಿ, ಮುಸ್ತಾಕ್ ಉಂಟವಾಲ, ಶರಣಪ್ಪ ಬಮ್ಮಿಗಟ್ಟಿ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net