

ಹುಬ್ಬಳ್ಳಿ : ಹುಬ್ಬಳ್ಳಿಯಿಂದ ಪುಣೆಗೆ ಸೆ. 18 ರಿಂದ ವಂದೆ ಭಾರತ್ ರೈಲು ಪ್ರಾರಂಭವಾಗಲಿದೆ.
ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸೆ. 16ರಂದು ವಂದೆ ಬಾರತ್ ರೈಲಿನ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಅಹ್ಮದಾಬಾದ್ ನಿಂದ ವರ್ಚುವಲ್ ಸಮಾರಂಭದ ಮೂಲಕ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿಯಿಂದ ಸೆ. 18ರಿಂದ ನಿರಂತರವಾಗಿ ಆರಂಭವಾಗಲಿದ್ದು ವಾರದಲ್ಲಿ ಮೂರು ಬಾರಿ (ಬುಧವಾರ, ಶುಕ್ರವಾರ ಹಾಗೂ ಭಾನುವಾರ) ಹುಬ್ಬಳ್ಳಿಯಿಂದ ಮತ್ತು ಗುರುವಾರ, ಶನಿವಾರ ಮತ್ತು ಸೋಮವಾರದಂದು ಪುಣೆಯಿಂದ ಹುಬ್ಬಳ್ಳಿಗೆ ವಂದೆ ಭಾರತ್ ಎಕ್ಸ್ಪ್ರೆಸ್ ರೈಲು ಸಂಚರಿಸಲಿದೆ.
ಇದು ಹುಬ್ಬಳ್ಳಿ-ಪುಣೆ ನಡುವೆ ನೇರವಾಗಿ ಸಂಚರಿಸಲಿದ್ದು, ಕೋಲ್ಹಾಪುರ ಮುಖಾಂತರ ಸಂಚರಿಸುವುದಿಲ್ಲ ಎಂದು ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.
ಪ್ರಯಾಣಿಕರ ಸ್ಪಂದನೆ ಮತ್ತು ಜನದಟ್ಟಣೆಯನ್ನು ಗಮನಿಸಿ ಮುಂದಿನ ದಿನಗಳಲ್ಲಿ ಈ ರೈಲುನ್ನು ಪ್ರತಿದಿನ ಸಂಚರಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.