ಮಧ್ಯರಾತ್ರಿ ನಡೆದ ಡಬಲ್​ ಮರ್ಡರ್​ಗೆ ಬೆಚ್ಚಿಬಿದ್ದ ಹುಬ್ಬಳ್ಳಿ ಜನತೆ: ಯುವಕರಿಬ್ಬರ ಬರ್ಬರ ಹತ್ಯೆ

Murder
Published on

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳಿಯಲ್ಲಿ ಮಧ್ಯರಾತ್ರಿಯೇ ನೆತ್ತರು ಹರಿದಿದ್ದು, ಜೋಡಿ ಕೊಲೆಗೆ ಜನರು ಬೆಚ್ಚಿಬಿದ್ದಿದ್ದಾರೆ.

ಮಂಜುನಾಥ ಕಬ್ಬಿನ್ ಹಾಗೂ ನಿಯಾಜ್ ಕೊಲೆಯಾದ ಯುವಕರು. ಇಬ್ಬರು ಯುವಕರನ್ನು ದುಷ್ಕರ್ಮಿಗಳು ಮಧ್ಯರಾತ್ರಿ ಕೊಚ್ಚಿಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೆಳಗ್ಗೆ ಸವಿ ನಿದ್ದೆಯಿಂದ ಎದ್ದ ಜನರಿಗೆ ಜೋಡಿ ಕೊಲೆಯ ಸುದ್ದಿ ಆಘಾತವಾಗಿದೆ.

ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಗೋಪನಕೊಪ್ಪ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಇಬ್ಬರು ಯುವಕರ ಕೊಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಕೇಶ್ವಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net