ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ

gld 12-1
Published on

ಲೋಕಾಪುರ : ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಶುಕ್ರವಾರ ರಾತ್ರಿ ಭೇಟಿ ನೀಡಿ ವಸತಿ ನಿಲಯಗಳ ವ್ಯವಸ್ಥೆ ಹಾಗೂ ಸ್ವಚ್ಛತೆ ಪರಿಶೀಲಿಸಿದರು.

ಅಡುಗೆ ಕೋಣೆ, ವಿದ್ಯಾರ್ಥಿಗಳ ಕೊಠಡಿಗಳು, ಶೌಚಾಲಯಗಳು, ಗ್ರಂಥಾಲಯ, ಕಂಪ್ಯೂಟರ್ ಕೊಠಡಿಗಳನ್ನು ಪರಿಶೀಲಿಸಿ, ವಸತಿ ನಿಲಯಗಳು ಉತ್ತಮವಾಗಿ ನಿರ್ವಹಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳನ್ನು ಕಲಿಕೆಯ ಕಡೆ ಹೆಚ್ಚಿನದಾಗಿ ಪ್ರೋತ್ಸಾಹಿಸಿ ಕಳೆದ ಬಾರಿಕ್ಕಿಂತ ಈ ಬಾರಿ ಹೆಚ್ಚಿನ ಲಿತಾಂಶ ಬರುವಂತೆ ನೋಡಿಕೊಳ್ಳಬೇಕು. ಪ್ರತಿನಿತ್ಯ ಉತ್ತಮ ಪೌಷ್ಠಿಕ ಆಹಾರ ನೀಡುವುದರ ಜತೆಗೆ ಹಾಲು, ಮೊಟ್ಟೆ, ಬಾಳೆಹಣ್ಣು ನೀಡುವಂತೆ ನಿಲಯ ಮೇಲ್ವಿಚಾರಕರಿಗೆ ತಿಳಿಸಿದರು.

ಜಿಪಂ ಮುಖ್ಯಕಾರ್ಯನಿರ್ವಾಹಕ ಶಶಿಧರ ಕುರೇರ ಮಾತನಾಡಿ, ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಲಭಿಸುತ್ತಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡು ಪ್ರತಿಯೊಬ್ಬ ವಿದ್ಯಾರ್ಥಿಯು ಓದಿನ ಕಡೆ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ.ಎಂ.ತುಂಬರಮಟ್ಟಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಹಮ್ಮದ ಹನೀಪ್, ಅಶೋಕ ಕಾಂತಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net