

ಬಸವನಬಾಗೇವಾಡಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಮೇ 20 ರಂದು ಕಂದಾಯ ಗ್ರಾಮಗಳ ಫಲಾನುಭವಿಗಳ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಈ ಸಮಾವೇಶದ ಪೂವಭಾವಿ ಸಭೆಯನ್ನು ಮೇ. 16 ರಂದು ಸಂಜೆ 5ಕ್ಕೆ ಪಟ್ಟಣದ ವಿಜಯಪುರ ರಸ್ತೆಯ ಬಸವ ಭವನದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ, ಸಚಿವ ಶಿವಾನಂದ ಪಾಟೀಲ ಹಾಗೂ ಕಾನೂನು ಸಚಿವ ಎಚ್.ಕೆ. ಪಾಟೀಲ ನೇತೃತ್ವದಲ್ಲಿ ಪೂರ್ವ ಭಾವಿ ಸಭೆ ನಡೆಯಲಿದೆ ಎಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸುರೇಶ ಹಾರಿವಾಳ ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ ಹಾಗೂ ಕೊಲ್ಹಾರ ಬ್ಲಾಕ್ ಅಧ್ಯಕ್ಷ ರಫೀಕ್ ಪಕಾಲಿ ಜಂಟಿ ಹೇಳಿಕೆ ನೀಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಂದಾಯ ಗ್ರಾಮಗಳಾಗಿ ಪರಿವರ್ತನೆಗೊಂಡಿರುವ ಹಟ್ಟಿ, ಹಾಡಿ, ತಾಂಡಾ, ಪಾಳ್ಯ, ಮಜುರೆ ಗ್ರಾಮಗಳ ನಿವಾಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ. ಇದಕ್ಕಾಗಿ ಹೊಸಪೇಟೆಯಲ್ಲಿ ಹಮ್ಮಿಕೊಂಡಿರುವ ಬೃಹತ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ರಾಷ್ಟ್ರೀಯ ನಾಯಕರು ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹಾಗೂ ಪಕ್ಷದ ಮುಖಂಡರು ಪಾಲ್ಗೊಳ್ಳುವರು. ಕಾಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸುರೇಶ ಹಾರಿವಾಳ ಹಾಗೂ ರಫೀಕ್ ಪಕಾಲಿ ಮನವಿ ಮಾಡಿದ್ದಾರೆ.