ಅರಕಲಗೂಡಿನಲ್ಲಿ ಬೃಹತ್ ಉದ್ಯೋಗ ಮೇಳ

ಅರಕಲಗೂಡು ತಾಲೂಕು ಕೊಣನೂರು ಬಿಎಂಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದ ನಿರುದ್ಯೋಗಿಗಳು ಹೆಸರು ನೋಂದಾಯಿಸಲು ಸರದಿ ಸಾಲಿನಲ್ಲಿ ಸಾಗಿದರು.
ಅರಕಲಗೂಡು ತಾಲೂಕು ಕೊಣನೂರು ಬಿಎಂಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದ ನಿರುದ್ಯೋಗಿಗಳು ಹೆಸರು ನೋಂದಾಯಿಸಲು ಸರದಿ ಸಾಲಿನಲ್ಲಿ ಸಾಗಿದರು.
Published on

ಅರಕಲಗೂಡು: ತಾಲೂಕಿನ ಕೊಣನೂರು ಬಿ.ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ  ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿತ್ತು.

ಉದ್ಯೋಗ ಬಯಸಿ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರ್ ಪದವೀಧರರು, ಎಂಬಿಎ, ಬಿಬಿಎಂ, ಡಿಪ್ಲೋಮಾ, ಐಟಿಐ ಇತರೆ ಶಿಕ್ಷಣ ಪಡೆದ 600ಕ್ಕೂ ಹೆಚ್ಚು ಮಂದಿ ನಿರುದ್ಯೋಗಿ ಯುವಕ, ಯುವತಿಯರು ಪಾಲ್ಗೊಂಡು ಸಂದರ್ಶನ ಎದುರಿಸಿದರು.

ಮೇಳದಲ್ಲಿ 20ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ ಅಭ್ಯರ್ಥಿಗಳಿಂದ ಸೂಕ್ತ ದಾಖಲೆ ಸಂಗ್ರಹಿಸಿದವು. ಕಾಲೇಜು ಪ್ರಾಂಶುಪಾಲ ರಾಜೀವ್ ಮಾತನಾಡಿ, ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ ಎಲ್ಲ ಅಭ್ಯರ್ಥಿಗಳ ದಾಖಲೆ ಪರಿಶೀಲಿಸಿದ ನಂತರ ಕಂಪನಿಗಳಲ್ಲಿ ಶೇ. 90ರಷ್ಟು ಮಂದಿಗೆ ಉದ್ಯೋಗ ಸಿಗಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net