ಕೆ.ಆರ್.ನಗರದಲ್ಲಿ ಬೃಹತ್ ಉದ್ಯೋಗ ಮೇಳ

28 KRN-2
Published on

ಕೆ.ಆರ್.ನಗರ: ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ದೊಡ್ಡಸ್ವಾಮೇಗೌಡ ಅವರ ಜನ್ಮ ದಿನವನ್ನು ಪಕ್ಷಾತೀತ ಮತ್ತು ಜಾತ್ಯತೀವಾಗಿ ಆಚರಿಸಲು ಅಭಿಮಾನಿಗಳು ಮತ್ತು ಬೆಂಬಲಿಗರು ನಿರ್ಧರಿಸಿದರು.

ಪಟ್ಟಣದ ಚೀರನಹಳ್ಳಿ ರಸ್ತೆಯಲ್ಲಿರುವ ಸಂಗೊಳ್ಳಿ ರಾಯಣ್ಣ ಸಮುದಾಯ ಭವನದಲ್ಲಿ ಶನಿವಾರ ಆಯೋಜಿಸಿದ್ದ ಸಭೆಯಲ್ಲಿ ಬೆಂಬಲಿಗರು ಚರ್ಚಿಸಿ ಈ ತೀರ್ಮಾನ ಮಾಡಿದರು. ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳಬೇಕು ಎಂದು ಸಭೆಯಲ್ಲಿದ್ದ ಬಹುತೇಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸರ್ವರೂ ಬೆಂಬಲ ಸೂಚಿಸಿದರು.

ಶಾಸಕ ಡಿ.ರವಿಶಂಕರ್ ಮಾತನಾಡಿ, ಹಣ ಪೋಲು ಮಾಡುವ ಸಂಪ್ರದಾಯಕ್ಕೆ ನಾವೆಲ್ಲರೂ ನಾಂದಿಯಾಡಿ ಭವಿಷ್ಯದಲ್ಲಿ ನಿರುದ್ಯೋಗಿಗಳು, ರೋಗಿಗಳು ಮತ್ತು ನೊಂದವರಿಗೆ ಸಹಾಯಕ ಮಾಡುವ ಶಪಥ ಮಾಡಬೇಕು ಎಂದು ತಿಳಿಸಿದರು.

ಪಟ್ಟಣದ ಪುರಸಭೆಯ ಬಯಲು ರಂಗ ಮಂದಿರದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದ್ದು, 35 ವರ್ಷದೊಳಗಿನವರು ಶಿಬಿರದಲ್ಲಿ ಭಾಗವಹಿಸಬಹುದಾಗಿದೆ. ರಾಜ್ಯದ 100 ಕ್ಕು ಹೆಚ್ಚು ಕಂಪನಿಗಳು, ಕಾರ್ಖಾನೆಗಳು ಆಗಮಿಸಲಿವೆ ಎಂದು ಮಾಹಿತಿ ನೀಡಿದ ಅವರು, ಆರೋಗ್ಯ ಮತ್ತು ರಕ್ತದಾನ ಶಿಬಿರವೂ ನಡೆಯಲಿದೆ ಎಂದರು.

ಇದೇ ವೇಳೆ ಆರೋಗ್ಯ ಮತ್ತು ಉದ್ಯೋಗ ಮೇಳದ ಪ್ರಚಾರ ಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಣೆದಾರರ ಮಹಾಮಂಡಳ ಅಧ್ಯಕ್ಷ ಎಂ.ರಮೇಶ್, ಜಿಪಂ ಮಾಜಿ ಸದಸ್ಯರಾದ ಜಿ.ಆರ್.ರಾಮೇಗೌಡ, ಜಯರಾಮೇಗೌಡ, ಮಾರ್ಚಳ್ಳಿ ಶಿವರಾಂ, ತಾಪಂ ಮಾಜಿ ಅಧ್ಯಕ್ಷ ಮಂಜುನಾಥ್, ಕುರುಬರ ಸಂಘದ ಅಧ್ಯಕ್ಷ ಜೆ.ಶಿವಣ್ಣ, ಉಪ್ಪಾರ ಸಂಘದ ತಾಲೂಕು ಅಧ್ಯಕ್ಷ ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ನಗರಾಧ್ಯಕ್ಷ ಎಂ.ಜೆ.ರಮೇಶ್, ವಕ್ತಾರ ಸೈಯದ್ ಜಾಬೀರ್, ಮಹಿಳಾ ಘಟಕ ಅಧ್ಯಕ್ಷೆ ರಾಣಿ, ಲತಾ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net