ಹಲ್‌ಚಲ್ ಸೃಷ್ಟಿಸಿದ ಫಡ್ನವೀಸ್-ಜಾರಕಿಹೊಳಿ ಭೇಟಿ

8 BGV 10 Ramesh Jarakiholi-Web
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ.
Published on

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ರಾಜಕೀಯ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ಗುರುವಾರ ಭೇಟಿ ಮಾಡಿರುವುದು ಭಾರಿ ಕುತೂಹಲ ಮೂಡಿಸಿದೆ.

ಕಳೆದ ತಿಂಗಳು ದೆಹಲಿ ಮತ್ತು ಮುಂಬೈನಲ್ಲಿ ಡ್ನವೀಸ್ ಅವರನ್ನು ಜಾರಕಿಹೊಳಿ ಭೇಟಿ ಮಾಡಿದ್ದರು. ಇದೀಗ ಮತ್ತೊಮ್ಮೆ ಗುರುವಾರ ಭೇಟಿ ಮಾಡಿರುವುದು ತೀವ್ರ ಸಂಚಲನ ಮೂಡಿಸಿದೆ. ಏತನ್ಮಧ್ಯೆ ಗುರುವಾರ ಮುಂಬೈನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಸ್ವಂತ ಬಲದ ಮೇಲೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಹೇಳಿರುವುದು ಸಹ ಕುತೂಹಲ ಮೂಡಿಸಿದೆ.

ರಮೇಶ ಜಾರಕಿಹೊಳಿ ಹಾಗೂ ದೇವೇಂದ್ರ ಫಡ್ನವೀಸ್ ಭೇಟಿ ಆಗಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಮತ್ತು ರಮೇಶ ಜಾರಕಿಹೊಳಿ ಬಿಜೆಪಿ ಸೇರ್ಪಡೆಗೂ ಸಹ ಫಡ್ನವೀಸ್ ಮಧ್ಯಸ್ಥಿಕೆ ವಹಿಸಿದ್ದರು. ಇದೀಗ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸಲು ರಮೇಶ ಜಾರಕಿಹೊಳಿ ಅವರು ವೇದಿಕೆ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net