

ಮುನಿರಾಬಾದ್: ಸಮೀಪದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆಗಳು ಮತ್ತು ದೇವಸ್ಥಾನ ಹಿಂಬದಿಯ ತುಂಗಭದ್ರಾ ನದಿ ದಡದಲ್ಲಿನ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ಭಾನುವಾರವು ಮುಂದುವರೆಯಿತು.
ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಸುರಕ್ಷಿತ ಮತ್ತು ಸಮರ್ಪಕ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಜಿಲ್ಲಾಡಳಿತ ಕಾರ್ಯಾಚರಣೆ ಕೈಗೊಂಡಿದೆ. ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಹಿಂಭಾಗದ ತುಂಗಭದ್ರಾ ನದಿ ದಡದಲ್ಲಿದ್ದ ಅನಧಿಕೃತ ಅಂಗಡಿಗಳನ್ನು ಮತ್ತು ರೈಲ್ವೆ ನಿಲ್ದಾಣದ ಮುಂಭಾಗದ ರಸ್ತೆಗಳಲ್ಲಿ ಒತ್ತುವರಿ ಮಾಡಿಕೊಂಡಿದ್ದ ಗೂಡಂಗಡಿಗಳನ್ನು ಜೆಸಿಬಿಯಿಂದ ತೆರವುಗೊಳಿಸಲಾಯಿತು. ಸಾರ್ವಜನಿಕ ಪ್ರದೇಶಗಳಲ್ಲಿನ ಅನಧಿಕೃತ ಕಟ್ಟಡಗಳಿಂದ ಉಂಟಾಗಿದ್ದ ತೊಂದರೆಗಳನ್ನು ನಿವಾರಿಸಿ, ಸುಗಮ ಸಂಚಾರ ವ್ಯವಸ್ಥೆ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಕ್ರಮವನ್ನು ಭಕ್ತರು ಸ್ವಾಗತಿಸಿದ್ದಾರೆ.