ಅತ್ಯಂತ ಉದ್ದದ ಮಾನವ ಸರಪಳಿ ದ.ಕ.ಜಿಲ್ಲೆಗೆ ದ್ವಿತೀಯ ಸ್ಥಾನ

IMG_7040
Published on


ಮಂಗಳೂರು : ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.15ರಂದು ಬೀದರ್‌ನಿಂದ ಚಾಮರಾಜ ನಗರದವರೆಗೆ ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದ ಮಾನವ ಸರಪಳಿ ನಿರ್ಮಾಣ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಜಿಲ್ಲೆಗಳಿಗೆ ಒಟ್ಟು
ಐದು ವಿಭಾಗಗಳಲ್ಲಿ ತಲಾ 3 ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಲಾಗಿತ್ತು. ಈ ವಿಭಾಗಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯು ಅತ್ಯಂತ ಉದ್ದದ ಮಾನವ ಸರಪಳಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ನ.26ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರಿಂದ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net