ಮಾನವ ಸರಪಳಿ ಹಾದಿ ಪರಿಶೀಲನೆ : ವಿವಿಧ ಸ್ಥಳಗಳಿಗೆ ಡಿಸಿ, ಜಿಪಂ ಸಿಇಒ ಭೇಟಿ

dc
Published on

ಸುಳ್ಯ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆ.15ರಂದು ಹಮ್ಮಿಕೊಂಡಿರುವ ಬೃಹತ್ ಮಾನವ ಸರಪಳಿ ರಚನೆಯಾಗುವ ಹಾದಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುವಾರ ಪರಿಶೀಲಿಸಿದರು.

ಸುಳ್ಯ ತಾಲೂಕಿನ ಕನಕಮಜಲಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ ತಾಲೂಕು ಅಧಿಕಾರಿಗಳಿಂದ ಮಾನವ ಸರಪಳಿ ಆಯೋಜನೆಗೆ ನಡೆಸಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದು, ಸೂಕ್ತ ನಿರ್ದೇಶನ ನೀಡಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ, ಸುಳ್ಯ ತಹಸೀಲ್ದಾರ್ ಎಂ.ಮಂಜುನಾಥ್, ಸುಳ್ಯ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net