ದೇಶಕ್ಕೆ ಪ್ರಜಾಪ್ರಭುತ್ವ ಅಡಿಗಲ್ಲು

sarapali
ಕಾಪು ತಾಲೂಕಿನ ಉಚ್ಚಿಲದಲ್ಲಿನ ಮಾನವ ಸರಪಳಿಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿನಯಕುಮಾರ್ ಸೊರಕೆ, ಲಾಲಾಜಿ ಆರ್.ಮೆಂಡನ್, ತಹಸೀಲ್ದಾರ್ ಪ್ರತಿಭಾ ಆರ್. ಮತ್ತಿತರರು ಪಾಲ್ಗೊಂಡಿದ್ದರು
Published on

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ದೇಶದ ಭದ್ರ ಬುನಾದಿಗೆ ಪ್ರಜಾಪ್ರಭುತ್ವ ಅಡಿಗಲ್ಲಾಗಿದೆ. ವಿಶ್ವದ ಮಹಾನ್ ಪ್ರಜಾಪ್ರಭುತ್ವ ಇರುವ ದೇಶ ಭಾರತ. ಜಾತ್ಯತೀತ, ಧರ್ಮಾತೀತ, ಪಕ್ಷಾತೀವಾಗಿರುವ ಪ್ರಜಾಪ್ರಭುತ್ವವನ್ನು ಮನನ ಮಾಡಿಕೊಂಡು ಇನ್ನಷ್ಟು ಗಟ್ಟಿಗೊಳಿಸಬೇಕಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಭಿಪ್ರಾಯಪಟ್ಟರು.

ಉಚ್ಚಿಲದಲ್ಲಿ ಕಾಪು ತಾಲೂಕು ವ್ಯಾಪ್ತಿಯ ಬೃಹತ್ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಮಾತನಾಡಿದರು.ತಹಸೀಲ್ದಾರ್ ಪ್ರತಿಭಾ ಆರ್., ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಡಿವೈಎಸ್ಪಿ ಅರವಿಂದ ಕಲಗುಜ್ಜಿ, ಬಡಾ ಗ್ರಾಪಂ ಅಧ್ಯಕ್ಷ ಶಿವಕುಮಾರ್ ಮೆಂಡನ್, ಕಾಪು ತಾಪಂ ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ, ಕಾರ್ಕಳ ತಾಪಂ ಕಾರ್ಯನಿರ್ವಹಣಾಧಿಕಾರಿ ಕೃಷ್ಣಾನಂದ, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್ ನಾಯಕ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರೋಷನ್, ಕಾಪು ಪುರಸಭೆ ಮುಖ್ಯಾಧಿಕಾರಿ ನಾಗರಾಜ್ ಸಿ., ಕಾರ್ಕಳ ಪುರಸಭೆ ಮುಖ್ಯಾಧಿಕಾರಿ ರೂಪಾ ಶೆಟ್ಟಿ, ಅರಣ್ಯ ಇಲಾಖೆ ಅಧಿಕಾರಿ ಜೀವನ್‌ದಾಸ್ ಶೆಟ್ಟಿ, ಪ್ರಭಾಕರ ಕುಲಾಲ್, ಉಪ ತಹಸೀಲ್ದಾರ್‌ಗಳಾದ ಅಶೋಕ್ ಕೋಟೆಕಾರ್, ರವಿಕಿರಣ್, ದೇವಕಿ, ಕಂದಾಯ ನಿರೀಕ್ಷಕ ಇಜಾಜ್ ಸಾಬೀರ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಕೋಟ್ಯಾನ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.

ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಪಾಪನಾಶಿನಿ ನದಿ ಸೇತುವೆಯಿಂದ ಹೆಜಮಾಡಿ ಶಾಂಭವಿ ನದಿ ಸೇತುವೆವರೆಗಿನ ಸುಮಾರು 24 ಕಿ.ಮೀ. ಉದ್ದದ ಮಾನವ ಸರಪಳಿ ರಚಿಸಲಾಯಿತು. ಶಾಲಾ ಬ್ಯಾಂಡ್, ಚೆಂಡೆ, ಗೊಂಬೆ ಕಲಾತಂಡ, ಕಲಶ ಹಿಡಿದು ಮಹಿಳೆಯರ ತಂಡ ಮೆರುಗು ನೀಡಿತು. ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಮುಂಭಾಗ ಗಿಡ ನೆಡಲಾಯಿತು. ನಂತರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net