ಶಿಕ್ಷಣದೊಂದಿಗೆ ಮಾನವೀಯ ಗುಣಗಳು ಮುಖ್ಯ

vinayaka convent
Published on

ಚಾಮರಾಜನಗರ: ಮಕ್ಕಳು ಶಿಕ್ಷಣದ ಜತೆಗೆ ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಶ್ರೀ ವಿನಾಯಕ ಕಾನ್ವೆಂಟ್‌ನ ನಿರ್ವಾಹಕ ಚಂದ್ರಶೇಖರ್ ಸಲಹೆ ನೀಡಿದರು.


ಗುಂಡ್ಲುಪೇಟೆ ಪಟ್ಟಣದ ಅಶ್ವಿನಿ ಬಡಾವಣೆಯಲ್ಲಿರುವ ಶ್ರೀ ವಿನಾಯಕ ಕಾನ್ವೆಂಟ್ (ಸಿಬಿಎಸ್‌ಇ)ನಲ್ಲಿ ಬುಧವಾರ ಹಮ್ಮಿಕೊಂಡಿದ್ದ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳು ಮುಖ್ಯ.

ಉತ್ತಮ ಗುಣಗಳು ಜೀವನದ ಅಂತಿಮದವರೆಗೆ ನಮ್ಮನ್ನು ಕಾಪಾಡುತ್ತವೆ. ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಅಂಕಗಳನ್ನು ಪಡೆಯಿರಿ ಎಂದು ಶುಭ ಹಾರೈಸಿದರು. 9ನೇ ತರಗತಿ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಬೀಳ್ಕೊಟ್ಟರು. 10ನೇ ತರಗತಿ ವಿದ್ಯಾರ್ಥಿಗಳಾದ ಶ್ರೇಯಾ, ದೀಪಾಂಜಲಿ ಶಾಲೆಯ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಪ್ರಾಂಶುಪಾಲ ಸುಭಾಷ್, ಲಕ್ಷ್ಮೀ ಚಂದ್ರಶೇಖರ್, ಶಿಕ್ಷಕರು, ಬೋಧಕೇತರ ಸಿಬ್ಬಂದಿ ಹಾಜರಿದ್ದರು.

Related Stories

No stories found.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net