ಶಿಕ್ಷಣದಿಂದ ಮಾನವ ಸಂಪನ್ಮೂಲ ಸೃಷ್ಟಿ

ಸುತ್ತೂರಿನ ಜೆಎಸ್‌ಎಸ್ ಉಚಿತ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಕ್ಕಳು ಭಾಗವಹಿಸಿದ್ದರು.
ಸುತ್ತೂರಿನ ಜೆಎಸ್‌ಎಸ್ ಉಚಿತ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಕ್ಕಳು ಭಾಗವಹಿಸಿದ್ದರು.
Published on

ಸುತ್ತೂರು: ಮಕ್ಕಳಿಗೆ ಕೊಡುವ ಶಿಕ್ಷಣ ದೇವರಿಗೆ ಬೆಳಗುವ ಆರತಿಯಷ್ಟೆ ಶ್ರೇಷ್ಠ ಎಂದು ಬೀದರ್‌ನ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಬಸವಕುಮಾರ ಪಾಟೀಲ್ ಅಭಿಪ್ರಾಯಪಟ್ಟರು.

ಅಕ್ಷರ ಜ್ಯೋತಿ ಯಾತ್ರೆ ಕಾರ್ಯಕ್ರಮ ಪ್ರಯುಕ್ತ ಇಲ್ಲಿನ ಜೆಎಸ್‌ಎಸ್ ಉಚಿತ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿಕ್ಷಣದ ಮಹತ್ವ ಕುರಿತು ಉಪನ್ಯಾಸ ನೀಡಿದ ಅವರು, ಶಿಕ್ಷಣದಿಂದ ಮಾನವ ಸಂಪನ್ಮೂಲ ಸೃಷ್ಟಿಯಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ವಿದ್ಯಾವಂತರಾಗುವುದರ ಜತೆಗೆ ಸದ್ಗುಣ, ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು.

ವಿದ್ಯೆ ಎಂದರೆ ಬೆಳಕು, ಈ ಬೆಳಕು ಪ್ರತಿಯೊಬ್ಬರಿಗೂ ಅವಶ್ಯಕ. ವಿದ್ಯೆ ಪಡೆಯದವರ ಬದುಕು ಕತ್ತಲಾಗುತ್ತದೆ. ಆದ್ದರಿಂದ ಈ ಬೆಳಕನ್ನು ಪಡೆದು ತಮ್ಮ ಮನೆಯನ್ನೂ ಬೆಳಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಪಂಡಿತ ಬಾಳೂರೆ, ಕೆನರಾ ಬ್ಯಾಂಕ್‌ನ ನಿವೃತ್ತ ನೌಕರ ಶಿವಾಜಿರಾವ ಮಾನೆ, ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಸಹಾಯಕ ಸಂಯೋಜನಾಧಿಕಾರಿ ವೀರಭದ್ರಯ್ಯ, ನಿಲಯಪಾಲಕ ಮಹಾದೇವಪ್ರಸಾದ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net