

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಸಮಿತಿ ನಿರ್ಧರಿಸಿದೆ ಎಂದು ಸಮಿತಿ ಅಧ್ಯಕ್ಷೆ ವಿ.ಪಿ.ಸುಶೀಲಾ ತಿಳಿಸಿದರು.
ದೇಶದ ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆ ಹಾಗೂ ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ಬಡವರ ಉದ್ಧಾರ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳ ಮೂಲಕ ಇದನ್ನು ಸಾಬೀತುಪಡಿಸಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.