

ಮಂಡ್ಯ: ಮದ್ದೂರು ತಾಲೂಕು ಚಾಮನಹಳ್ಳಿ ಗ್ರಾಮದಲ್ಲಿ ಡಿ.13ರಂದು ಸವರ್ಣೀಯ ಯುವಕರು, ಪರಿಶಿಷ್ಠ ಸಮುದಾಯದ ಯುವಕರ ವಿರುದ್ಧ ಜಾತಿ ನಿಂದನೆ, ಹಲ್ಲೆ ಮತ್ತು ದೌರ್ಜನ್ಯ ನಡೆಸಿದ್ದಾರೆ. ಈ ಸಂಬಂಧ ಡಿ.14ರಂದು ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರೂ, ಇದುವರೆಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಮಾನವ ಹಕ್ಕುಗಳ ರಕ್ಷಣಾ ಪಡೆ ರಾಜ್ಯಾಧ್ಯಕ್ಷ ಎಂ.ಸಿ.ಶಿವರಾಜು ಆರೋಪಿಸಿದರು.
ಗ್ರಾಮದ ಅಂಗಡಿಯೊಂದರಲ್ಲಿ ವಸ್ತುಗಳನ್ನು ಕೊಳ್ಳಲು ಹೋದಾಗ 20 ಜನ ಸವರ್ಣೀಯರು ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ್ದು, ಸಂಬಂಧ ದೂರು ದಾಖಲಿಸಲಾಗಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಗ್ರಾಮದಲ್ಲಿನ ಭಯದ ವಾತಾವರಣವನ್ನು ದೂರ ಮಾಡಬೇಕು. ಇಲ್ಲದಿದ್ದರೆ ಚಾಮನಹಳ್ಳಿ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮಾಡಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.
ಚಂದ್ರಕುಮಾರ್, ಶೇಷಾದ್ರಿ, ರಾಜೇಶ್, ಕಾರ್ತಿಕ್ ಇದ್ದರು.