ವಚನಗಳಲ್ಲಿ ಅಡಗಿದೆ ಮಾನವೀಯ ಮೌಲ್ಯಗಳು

snd vahcana
ಸಿಂಧನೂರಿನಲ್ಲಿ ಬಸವ ಜಯಂತಿ ನಿಮಿತ್ತ ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.
Published on

ಸಿಂಧನೂರು: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರು ರಚಿಸಿದ ವಚನಗಳು ಪ್ರಸ್ತುತವಾಗಿವೆ ಎಂದು ನಿವೃತ್ತ ಮುಖ್ಯಶಿಕ್ಷಕ ಬೀರಪ್ಪ ಶಂಭೋಜಿ ಹೇಳಿದರು.

ಬಸವೇಶ್ವರ ಜಯಂತಿ ನಿಮಿತ್ತ ಬಸವ ಪ್ರಸಾದ ನಿಲಯದಲ್ಲಿ ಶನಿವಾರ ಬಸವ ಕೇಂದ್ರ ಹಾಗೂ ಬಸವಪರ ಸಂಘಟನೆಗಳಿಂದ ಪದವಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ವಿಷಯ ಕುರಿತ ಪ್ರಬಂಧ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಚನಗಳಲ್ಲಿ ಜೀವನ, ಮಾನವೀಯ ಮೌಲ್ಯಗಳು ಅಡಕವಾಗಿವೆ. ಸಮಾಜದಲ್ಲಿನ ಜಾತಿ, ಮೌಢ್ಯ ನಿರ್ಮೂಲನೆಗೆ ಬಸವಣ್ಣನವರು ಶ್ರಮಿಸಿದರು. ವಿದ್ಯಾರ್ಥಿಗಳು ವಚನಗಳನ್ನು ಓದಿ ಅದರಲ್ಲಿನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ದೈಹಿಕ ಶಿಕ್ಷಣ ಶಿಕ್ಷಕ ಎಚ್.ಎಫ್.ಮಸ್ಕಿ, ಎಲ್‌ಬಿಕೆ ಕಾಲೇಜ್ ಪ್ರಾಚಾರ್ಯ ಪರಶುರಾಮ ಮಲ್ಲಾಪುರ, ಬಸವಕೇಂದ್ರದ ಉಪಾಧ್ಯಕ್ಷ ಬಸವಲಿಂಗಪ್ಪ ಬಾದರ್ಲಿ, ಉಪನ್ಯಾಸಕ ಬಸವರಾಜ ಬಳಿಗಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net