ನಾಗೇನಹಳ್ಳಿ ಹರೀಶ್ ಅವಿರೋಧ ಆಯ್ಕೆ

21blrp1
Published on

ಬೇಲೂರು: ತಾಲೂಕಿನ ಹುನುಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನಾಗೇನಹಳ್ಳಿ ಹರೀಶ್ ಅವಿರೋಧವಾಗಿ ಆಯ್ಕೆಯಾದರು.
ರಚಿತಾ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ನಾಗೇನಹಳ್ಳಿ ಗ್ರಾಮದ ಸದಸ್ಯ ಹರೀಶ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಸತೀಶ್ ಅವಿರೋಧ ಆಯ್ಕೆ ಘೋಷಿಸಿದರು. ಹುನುಗನಹಳ್ಳಿ ಗ್ರಾಪಂ ಉಪಾಧ್ಯಕ್ಷೆ ವನಜಾಕ್ಷಿ, ಸದಸ್ಯರಾದ ಮಮತಾ, ಜೀವನ್, ರಚಿತಾ, ರೂಪಾ, ಮೀನಾಕ್ಷಿ , ತಾಪಂ ಮಾಜಿ ಉಪಾಧ್ಯಕ್ಷೆ ಪದ್ಮಾಕ್ಷಿ ಸತ್ಯನಾರಾಯಣ್, ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್, ಎಪಿಎಂಸಿ ಮಾಜಿ ಅಧ್ಯಕ್ಷ ಮಹೇಶ್, ಮುಖಂಡರಾದ ಲೋಕೇಗೌಡ, ಗೋಪಾಲಗೌಡ, ಸತ್ಯನಾರಾಯಣ, ಚಿದೂಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net