

ಹನೂರು: ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದವನ್ನು ಮಂಗಳವಾರ ಸಂಜೆ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಮಂಚಾಪುರ ಗ್ರಾಮದ ಗೌತಮ್(33) ಬಂಧಿತ ಆರೋಪಿ.
ಈತ ಸಂಜೆ 5 ಗಂಟೆ ವೇಳೆಯಲ್ಲಿ ನಾಲ್‌ರೋಡ್‌ನಿಂದ ರಾಮಾಪುರದ ಕಡೆಗೆ ಬೈಕ್‌ನಲ್ಲಿ ಒಣ ಗಾಂಜಾವನ್ನು ಸಾಗಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅಪರಾಧ ವಿಭಾಗದ ಎಸೈ ಲೋಕೇಶ್, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಸಿಬ್ಬಂದಿ ಜತೆ ದಾಳಿ ನಡೆಸಿ ಪರಿಶೀಲಿಸಿದಾಗ ಗಾಂಜಾ ಇರುವುದು ದೃಢಪಟ್ಟಿದೆ. ಬಳಿಕ 1 ಕೆ.ಜಿ 900 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಆತನನ್ನು ಬಂಧಿಸಿ ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿಯಲ್ಲಿ ಸಿಬ್ಬಂದಿ ನಾಗೇಂದ್ರ, ಗಿರೀಶ್, ಸಿದ್ದೇಶ್, ಮಹೇಂದ್ರ ಹಾಗೂ ಲಿಯಾಖತ್ ಆಲಿಖಾನ್ ಭಾಗವಹಿಸಿದ್ದರು.