ಕಾನೂನು ಓದುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಿ

14 Dwd 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಹಲವು ಕೋರ್ಸ್ಗಳನ್ನು ಬಾಹ್ಯವಾಗಿ ಅಭ್ಯಸಿಸಬಹುದು. ಆದರೆ, ಕಾನೂನು ಕೋರ್ಸ್ನ್ನು ಬಾಹ್ಯವಾಗಿ ಅಭ್ಯಸಿಸಲು ಅವಕಾಶ ಇರುವುದಿಲ್ಲ. ವಿದ್ಯಾರ್ಥಿಗಳು ಕಾನೂನು ಓದುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ತಂದೆ- ತಾಯಿ ಹಾಗೂ ಕಲಿಸಿದ ಗುರುಗಳಿಗೆ ವಿಧೇಯರಾಗಿ ನಡೆದುಕೊಳ್ಳಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ ಹೇಳಿದರು.
ನಗರದ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯ ಹುರಕಡ್ಲಿ ಅಜ್ಜ ಕಾನೂನು ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ 2023- 24ನೇ ಸಾಲಿನ ವಿದ್ಯಾರ್ಥಿ ಒಕ್ಕೂಟ, ಕ್ರೀಡಾ ಚಟುವಟಿಕೆ ಮತ್ತು ಎನ್‌ಎಸ್‌ಎಸ್ ಚಟುವಟಿಕಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯಾಧ್ಯಕ್ಷ ಆರ್.ಯು. ಬೆಳ್ಳಕ್ಕಿ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಟ್ಟರೆ ಅವರಿಗೆ ಯಶಸ್ಸು ಲಭಿಸುತ್ತದೆ ಎಂದರು.
ಪ್ರಾಚಾರ್ಯೆ ಡಾ. ಸವಿತಾ ಪಾಟೀಲ ಸ್ವಾಗತಿಸಿದರು. ಡಾ. ಎಸ್.ಎಸ್. ಗಾಳಿಮಠ ವಾರ್ಷಿಕ ವರದಿ ಮಂಡಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಬಸವರಾಜ ಸಂತೋಜಿ ಪ್ರಶಸ್ತಿ ಪ್ರದಾನ ಸಮಾರಂಭ ನಿರ್ವಹಿಸಿದರು. ಪ್ರವೀಣ ಮುನವಳ್ಳಿ ವಂದಿಸಿದರು.
ಸAಸ್ಥೆಯ ಉಪಾಧ್ಯಕ್ಷ ವಿ.ಬಿ. ಯಳಲ್ಲಿ, ಜಂಟಿ ಕಾರ್ಯದರ್ಶಿ ಎಸ್.ಎಂ. ಅಗಡಿ, ಹಿರಿಯ ವಕೀಲ ಕೆ.ಬಿ. ನಾವಲಗಿಮಠ, ಆಡಳಿತ ಮಂಡಳಿ ಸದಸ್ಯ ಬಸವರಾಜ ತಾಳಿಕೋಟಿ, ಶಿವಲಿಂಗ ನೀಲಗುಂದ ಹಾಗೂ ಹಳೆಯ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net