ಪತ್ನಿ ಬಿಟ್ಟು ಹೋಗಿದ್ದರಿಂದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Crime Logo
Published on

ಹಾವೇರಿ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಪತ್ನಿ ಬಿಟ್ಟು ಹೋಗಿದ್ದರಿಂದ ಬೇಸರಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಗಡಿ ಗ್ರಾಮದಲ್ಲಿ ನಡೆದಿದೆ.

ಮಂಜಪ್ಪ ತಿಪ್ಪಣ್ಣ ಪವಾಡೆಪ್ಪನವರ (40) ಮೃತ ವ್ಯಕ್ತಿ.

ಈತ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಅಲ್ಲದೆ ಈತನನ್ನು ಪತ್ನಿ ಕೂಡ ಬಿಟ್ಟು ಹೋಗಿದ್ದಳು. ಇದರಿಂದ ಬೇಸರಗೊಂಡ ಮಂಜಪ್ಪ ಮನೆಯ ಹಿಂಭಾಗದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net