

ರಾಣೆಬೆನ್ನೂರ: ಪತ್ನಿಯ ಜತೆ ಮನೆಯ ವೈಯಕ್ತಿಕ ವಿಚಾರಕ್ಕೆ ಜಗಳ ಮಾಡಿಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಮಾದವರಾನಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಮಂಜಪ್ಪ ಬಸವರಾಜಪ್ಪ ಪೂಜಾರ (36) ಮೃತ ವ್ಯಕ್ತಿ.
ಈತ ಮನೆಯ ವೈಯಕ್ತಿಕ ಜಳಗದಿಂದ ಬೇಸತ್ತು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.