ಪುದುಪಾಡಿ ದೇವಸ್ಥಾನದಲ್ಲಿ ಹುತ್ತರಿ ಸಂಭ್ರಮ

15 vpt 2
ಹುತ್ತರಿ ಹಬ್ಬದ ಪ್ರಯುಕ್ತ ಕದರಿನೊಂದಿಗೆ ದೇವಸ್ಥಾನದ ಆವರಣದಲ್ಲಿ ನೆರೆದಿರುವ ಭಕ್ತರು .
Published on

ವಿರಾಜಪೇಟೆ : ಸಮೀಪದ ಬೇಟೋಳಿ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಹುತ್ತರಿ ಹಬ್ಬವನ್ನು ಶನಿವಾರ ಶಾಸ್ತ್ರೋಕ್ತವಾಗಿ ಆಚರಿಸಲಾಯಿತು.

ದೇವಸ್ಥಾನದ ಅರ್ಚಕ ವಿಶ್ವನಾಥ್ ಭಟ್ ಅವರು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಮೊದಲಿಗೆ ದೇವಸ್ಥಾನದ ಆವರಣದಲ್ಲಿರುವ ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ನಾಗ, ಶ್ರೀ ವನದುರ್ಗೆ ಗುಡಿಗಳಿಗೆ ಅರ್ಚಕರು ವಿಶೇಷ ಪೂಜೆಯನ್ನು ಸಲ್ಲಿಸಿದರು. ತದನಂತರ ನೆರೆಯನ್ನು ಕಟ್ಟಿ ಸಮೀಪದ ಮಕ್ಕಿ ಮನೆ ಬಿ.ಆರ್.ಶ್ರೀನಿವಾಸ್ ಅವರ ಗದ್ದೆಯಿಂದ ಕದಿರನ್ನು ತೆಗೆದು ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ನೆರೆದಿದ್ದ ಭಕ್ತರು ಪೊಲಿ ಪೊಲಿಯೇ ದೇವಾ ಎಂದು ಕೂಗುತ್ತಾ ಸಿಡಿಮದ್ದನ್ನು ಸಿಡಿಸಿ ಸಂಭ್ರಮಿಸಿದರು. ಧಾನ್ಯಲಕ್ಷ್ಮೀಗೆ ಮಹಾ ಮಂಗಳಾರತಿ ಮಾಡಿದ ಬಳಿಕ ಕದಿರನ್ನು ದೇವಸ್ಥಾನದಲ್ಲಿ ಕಟ್ಟಲಾಯಿತು. ನೆರೆದಿದ್ದ ಭಕ್ತರಿಗೆ ಪ್ರಸಾದ ವಿತರಣೆ, ಹುತ್ತರಿಯ ವಿಶೇಷ ಖಾದ್ಯ ತಂಬಿಟ್ಟು ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net