ಅಭಿವೃದ್ಧಿ ಮರೆತ ಸರ್ಕಾರಗಳು- ಮಾಜಿ ಸಚಿವ ಆಲ್ಕೋಡ್ ಹನುಮಂತಪ್ಪ ಆರೋಪ

Alkode Hanumantappa
ಆಲ್ಕೋಡ್ ಹನುಮಂತಪ್ಪ
Published on

ಹಟ್ಟಿಚಿನ್ನದಗಣಿ: ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ಅಭಿವೃದ್ಧಿಯನ್ನು ಮರೆತಿವೆ ಎಂದು ಕೆಪಿಸಿಸಿ ವಕ್ತಾರ, ಮಾಜಿ ಸಚಿವ ಆಲ್ಕೋಡ್ ಹನುಮಂತಪ್ಪ ಆರೋಪಿಸಿದರು.

ರಾಜ್ಯ ಸರ್ಕಾರ ಅಂಗವೈಕಲ್ಯತೆ ಹೊಂದಿದ್ದು ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ. ಮೇಲಿಂದ ಮೇಲೆ ಬದಲಾಗುತ್ತಿರುವ ಸಚಿವ ಸಂಪುಟದಿಂದ ರಾಜ್ಯಕ್ಕೆ ಮುಖ್ಯಮಂತ್ರಿ ಯಾರು? ಯಾವ ಖಾತೆಗೆ ಯಾರು ಸಚಿವರೆಂದು ಶಾಸಕರು, ಅಧಿಕಾರಿಗಳಿಗೇ ಗೊಂದಲ ಏರ್ಪಟ್ಟಿದ್ದು, ಇನ್ನು ಜನಸಾಮಾನ್ಯರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅಸಾಧ್ಯ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಅನುದಾನ ದುರ್ಬಳಕೆ ತಡೆಗೆ ಸರ್ಕಾರ ಕ್ರಮಕೈಗೊಳ್ಳಬೇಕು. ಹಟ್ಟಿ ಪಟ್ಟಣ ಗಬ್ಬು ವಾಸನೆಯಿಂದ ಕೂಡಿದ್ದು, ಸ್ವಚ್ಛತೆಗೆ ಒತ್ತು ನೀಡುವ ಜತೆಗೆ ಕಂಪನಿಯ ಕಾಲನಿಗಳಲ್ಲಿ ರಸ್ತೆ ನಿರ್ಮಾಣಕ್ಕೆ ಮುಂದಾಗಬೇಕು. ಸರ್ಕಾರದ ಅಧೀನದಲ್ಲಿರುವ ಗಣಿ ಕಂಪನಿಗೆ ಸಂಬಂಧಪಟ್ಟ ಗಣಿ ಸಚಿವರು ಹಾಗೂ ಉನ್ನತಾಧಿಕಾರಿಗಳು ಕಾಲಕಾಲಕ್ಕೆ ಭೇಟಿ ನೀಡಿ ಕಾರ್ಮಿಕರ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕೆಂದು ಆಗ್ರಹಿಸಿದರು. ಗ್ರಾಪಂ ಮಾಜಿ ಸದಸ್ಯ ಸೈಯದ್ ಪಾಷಾ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net