ಕಾಂಗ್ರೆಸ್ ಟಿಕೆಟ್ ನೀಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಹೂವಿನಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ

13-march-hdl-03
Published on

ಹೂವಿನಹಡಗಲಿ: ವಿಧಾನಸಭೆ ಚುನಾವಣೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ಹೈಕಮ್ಯಾಂಡ್ ನಿರ್ಧಾರ ಮಾಡುತ್ತದೆ ಎಂದು ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಹೇಳಿದರು.

ಪಟ್ಟಣದ ತಮ್ಮ ನಿವಾಸದ ಸುತ್ತಲಿನ ಮನೆಗಳ ಜನಕ್ಕೆ ಸೋಮವಾರ ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್ ವಿತರಿಸಿ, ನಂತರ ಸುದ್ದಿಗಾರೊಂದಿಗೆ ಮಾತನಾಡಿದರು. ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ ಆದೇಶದಂತೆ ರಾಜ್ಯದಲ್ಲಿ ಆಯಾ ಕ್ಷೇತ್ರಗಳ ಶಾಸಕರು ಗ್ಯಾರಂಟಿ ಕಾರ್ಡ್ ವಿತರಿಸಲಾಗುತ್ತಿದೆ. ಕಾಂಗ್ರೆಸ್‌ನ ಎರಡೂ ಬ್ಲಾಕ್ ಅಧ್ಯಕ್ಷ ಸ್ಥಾನಗಳ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಯಾರನ್ನು ನೇಮಿಸಬೇಕು ಎಂಬುದರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದರು.

ನಾನು ಬೇನಾಮಿ ಆಸ್ತಿ ಮಾಡಿದ್ದರೆ ಅದಕ್ಕೆ ಜನ ಉತ್ತರ ನೀಡುತ್ತಾರೆ. ನನ್ನ ಮೇಲೆ ಮಾಡಿರುವ ಆರೋಪಗಳಿಗೆ ನಾನು ಈಗ ಏನನ್ನೂ ಹೇಳುವುದಿಲ್ಲ. ಸಮಯ ಬಂದಾಗ ಉತ್ತರ ನೀಡುತ್ತೇನೆ ಎಂದರು.

ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಟವಾಳಗಿ ಕೊಟ್ರೇಶ್, ಕೆಪಿಸಿಸಿ ಒಬಿಸಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಗುರುವಿನ ರಾಜು, ಪುರಸಭೆ ಅಧ್ಯಕ್ಷ ಜ್ಯೋತಿ ಮಲ್ಲಣ್ಣ, ಉಪಾದ್ಯಕ್ಷ ತಿಮ್ಮಣ್ಣ, ಪ್ರದೇಶ ಕುರುಬ ಸಂಘದ ನಿರ್ದೇಶಕ ಬಿ.ಹನುಮಂತಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ಬಸವನಗೌಡ ಪಾಟೀಲ್, ತಾಪಂ ಮಾಜಿ ಅಧ್ಯಕ್ಷ ಎಸ್.ಹಾಲೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net