ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಚಾಲನೆ

100123 Linganayakanahalli CC Road
ಹೂವಿನಹಡಗಲಿ ತಾಲೂಕಿನ ಲಿಂಗನಾಯಕನಹಳ್ಳಿಯಲ್ಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಸಿಸಿ ರಸ್ತೆ ಕಾಮಗಾರಿಗೆ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು.
Published on

ಹೂವಿನಹಡಗಲಿ: ತಾಲೂಕಿನ ವಿವಿಧ ಭಾಗಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಮಂಗಳವಾರ ಚಾಲನೆ ನೀಡಿದರು.

ಹೊಳಲು ಗ್ರಾಮದ ಬಸವೇಶ್ವರನಗರದಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ನಿರ್ಮಾಣ, ಕತ್ತೆಬೆನ್ನೂರು ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚ ಸಿಸಿ ರಸ್ತೆ ಹಾಗೂ 19.50 ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡ ನಿರ್ಮಾಣ, ಲಿಂಗನಾಯಕನಹಳ್ಳಿಯಲ್ಲಿ ಸುಮಾರು 25 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಹೊಳಲು ಗ್ರಾಪಂ ಅದ್ಯಕ್ಷೆ ರೇಖಾ ಹೊಟ್ಟಿಗೌಡರ್, ಉಪಾಧ್ಯಕ್ಷ ನಾಗರಾಜ್ ಭೋವಿ, ಕತ್ತೆಬೆನ್ನೂರು ಗ್ರಾಪಂ ಅಧ್ಯಕ್ಷ ಹಾವನೂರು ನೀಲಪ್ಪ, ಕುರುವತ್ತಿ ಗ್ರಾಪಂ ಮಾಜಿ ಅದ್ಯಕ್ಷ ವೆಂಕಟೇಶ್, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net