ಬಾಕಿ ಕಾಮಗಾರಿ ಬೇಗ ಪೂರ್ಣಗೊಳಿಸಿ

Hadagali EO
ಡಾ.ಜಯರಾಮ್ ಚವ್ಹಾಣ್
Published on

ಹೂವಿನಹಡಗಲಿ: ತಾಲೂಕಿನ ಎಲ್ಲ ಗ್ರಾಪಂ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕು ಎಂದು ತಾಪಂ ಇಒ ಡಾ.ಜಯರಾಮ್ ಚವ್ಹಾಣ್ ಹೇಳಿದರು.

ಪಟ್ಟಣದ ತಾಪಂ ರಾಜೀವ್ ಗಾಂಧಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ತಾಲೂಕಿನಲ್ಲಿ ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಬೇಕು. ಎಲ್ಲ ಗ್ರಾಮಗಳಲ್ಲಿ ಸ್ಮಶಾನಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ನರೇಗಾ ಯೋಜನೆಯಡಿ ಅನುಷ್ಠಾನಗೊಂಡಿರುವ ಕಾಮಗಾರಿಗಳನ್ನು ಅಧಿಕಾರಿಗಳು ಪರಿಶೀಲಿಸಬೇಕು. ನಿಗದಿತ ಸಮಯದಲ್ಲಿ ಇ-ಹಾಜರಾತಿ ಕಡ್ಡಾಯವಾಗಿ ಹಾಕಬೇಕು ಎಂದು ತಿಳಿಸಿದರು.

ಹಳ್ಳಿ ಸಂತೆಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ನರೇಗಾ ಹಾಗೂ ಪಂಚಾಯತ್ ರಾಜ್‌ನ ವಿವಿಧ ಕಾಮಗಾರಿಗಳು ನನೆಗುದಿಗೆ ಬಿದ್ದಿದ್ದು ಪೂರ್ಣಗೊಳಿಸಲು ಕಾಲಾವಕಾಶ ನೀಡಲಾಗಿದೆ. ಅಷ್ಟರೊಳಗೆ ಎಲ್ಲ ಕಾಮಗಾರಿಗಳನ್ನು ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ನರೇಗಾ ಸಹಾಯಕ ನಿರ್ದೇಶಕ ಹೇಮಾದ್ರಿ ನಾಯ್ಕ, ಲೆಕ್ಕಾಧಿಕಾರಿ ವೀರಣ್ಣ ನಾಯ್ಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net