ಪಂಪ್‌ಸೆಟ್‌ಗೆ ಮೀಟರ್ ಅಳವಡಿಕೆ ಬೇಡ: ಹೂವಿನಹಡಗಲಿಯಲ್ಲಿ ಹಸಿರು ರೈತ ಸಂಘ ಪ್ರತಿಭಟನೆ

13092021 Hadagali formars protest
Published on

ಹೂವಿನಹಡಗಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಹಸಿರು ರೈತ ಸಂಘದ ತಾಲೂಕು ಘಟಕ ಸೋಮವಾರ ತಹಸಿಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಸಂಘದ ತಾಲೂಕು ಅಧ್ಯಕ್ಷ ರವೀಂದ್ರ ಸ್ವಾಮಿ ಮಾತನಾಡಿ, ಅಡುಗೆ ಅನಿಲ, ಇಂಧನ ದರ ಏರಿಕೆಯಿಂದ ಸಾಮಾನ್ಯ ಜನರು ಜೀವನ ನಡೆಸುವುದು ಕಷ್ಟವಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಸಿಲಿಂಡರ್ ಬೆಲೆಯನ್ನು 500 ರೂ.ಗೆ ಇಳಿಸಬೇಕು. ಇಂಧನ ದರವನ್ನೂ ಕಡಿಮೆ ಮಾಡಬೇಕು. ರೈತರ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಕೆ ನಿರ್ಧಾರ ಕೈಬಿಡಬೇಕು. ಪಟ್ಟಣದ ಸರ್ವೇ ಇಲಾಖೆಯಲ್ಲಿ ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಬಗೆಹರಿಸುತ್ತಿಲ್ಲ ಎಂದು ದೂರಿದರು.

ಹರಪನಹಳ್ಳಿ ಸಹಾಯಕ ಆಯುಕ್ತ ಹೂವಿನಹಡಗಲಿ ತಾಲೂಕಿನಲ್ಲಿ ವಾರಕ್ಕೆ ಎರಡು ದಿನ ವಾಸ್ತವ್ಯ ಮಾಡಬೇಕು. ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಿರುವ ರೈತರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿದರು. ಬಳಿಕ ತಹಸೀಲ್ದಾರ್ ಎಚ್. ಮಹೇಂದ್ರಗೆ ಮನವಿ ಸಲ್ಲಿಸಲಾಯಿತು. ಸಂಘದ ಜಿಲ್ಲಾಧ್ಯಕ್ಷ ವಿ.ಬಿ.ಸೋಮಶೇಖರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ, ಮುಖಂಡರಾದ ಸೋವೇನಹಳ್ಳಿ ಶಿವನಗೌಡ, ಬಸವರಾಜ್, ನಾಗನಗೌಡ, ಪಕ್ಕೀರಪ್ಪ, ಎಚ್.ಕೋಟೆಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net