ಹೂವಿನಹಡಗಲಿಯಲ್ಲಿ ಉತ್ತಮ ಮಳೆ

Hadagali Rain
ಹೂವಿನಹಡಗಲಿಯಲ್ಲಿ ಸೋಮವಾರ ಸುರಿದ ಮಳೆಯಲ್ಲೇ ವಾಹನಗಳು ಸಂಚರಿಸಿದವು.
Published on

ಹೂವಿನಹಡಗಲಿ: ಪಟ್ಟಣ ಸೇರಿ ತಾಲೂಕಿನ ವಿವಿಧೆಡೆ ಭಾನುವಾರ ಹಾಗೂ ಸೋಮವಾರ ಉತ್ತಮ ಮಳೆ ಸುರಿಯಿತು.

ತಾಲೂಕಿನ ಬಹತೇಕ ಗ್ರಾಮಗಳಿಂದ ವಿದ್ಯಾಭ್ಯಾಸಕ್ಕೆಂದು ಪಟ್ಟಣಕ್ಕೆ ಬರುವ ವಿದ್ಯಾರ್ಥಿಗಳು ಸೋಮವಾರ ಬಸ್ ನಿಲ್ದಾಣದಿಂದ ಶಾಲಾ ಕಾಲೇಜುಗಳಿಗೆ ತೆರಳಲು ಪರದಾಡಿದರು.

ಪಟ್ಟಣದ ಶಾಸ್ತ್ರೀ ವೃತ್ತ, ಮದಲಗಟ್ಟಿ ವೃತ್ತ ಸೇರಿ ಹೊಳಗುಂದಿಗೆ ತೆರಳುವ ರಸ್ತೆಯಲ್ಲಿ ಹಾಗೂ ಪ್ರಮುಖ ವೃತ್ತಗಳ ತಗ್ಗು ಪ್ರದೇಶದಲ್ಲಿ ನೀರು ತುಂಬಿದ ಕಾರಣ ವಾಹನ ಸವಾರರು ಸಂಚರಿಸಲು ತೊಂದರೆ ಅನುಭವಿಸಿದರು. ರಸ್ತೆ ಬದಿ ವ್ಯಾಪಾರಿಗಳು ಮಾರಾಟ ಮಾಡಲು ತಂದಿದ್ದ ವಸ್ತಗಳನ್ನು ಮಳೆಯಿಂದ ರಕ್ಷಿಸಿಕೊಳ್ಳಲು ತಾಡಪಾಲ್‌ಗಳನ್ನು ಮುಚ್ಚಿದ ದೃಶ್ಯಗಳು ಕಂಡು ಬಂದವು.

ಕಳೆದೊಂದು ವಾರದಿಂದ ಮಳೆ ಇಲ್ಲದೆ ತಾಲೂಕಿನಲ್ಲಿ ರೈತರು ಬಿತ್ತನೆ ಮಾಡಿದ್ದ ಬೆಳೆಗಳು ಒಣಗುವ ಹಂತದಲ್ಲಿದ್ದವು. ಎರಡು ದಿನಗಳಿಂದ ಸುರಿದ ಮಳೆಯಿಂದಾಗಿ ಇಟ್ಟಿಗಿ, ಹಿರೇಹಡಗಲಿ ಮತ್ತು ಹೂವಿನಹಡಗಲಿ ಹೋಬಳಿ ವ್ಯಾಪ್ತಿಯ ರೈತರು ಸಂತಸಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net