ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥ: ವಿವಿಧ ಆಸ್ಪತ್ರೆಗಳಿಗೆ ದಾಖಲು

2309 Marakabbi Village Sick
ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾದವರು ಕಾಂತೆಬೆನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Published on

ಹೂವಿನಹಡಗಲಿ: ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಗುರುವಾರ ಅಸ್ವಸ್ಥರಾಗಿದ್ದಾರೆ. ಗ್ರಾಮದಲ್ಲಿ ಜೆಜೆಎಂ ಯೋಜನೆಯಡಿ ಪೈಪ್‌ಲೈನ್ ಕಾಮಗಾರಿಗೆ ಕಾಲುವೆ ಅಗೆದು ಬಿಟ್ಟಿದ್ದರಿಂದ ಕುಡಿವ ನೀರಿಗೆ ಕಲುಷಿತ ಮಿಶ್ರಣವಾಗಿದ್ದರಿಂದ ಇದಕ್ಕೆ ಕಾರಣ ಎನ್ನಲಾಗಿದೆ.

ಕಲುಷಿತ ನೀರು ಕುಡಿದ ಜನರಲ್ಲಿ ಬೆಳಗ್ಗೆಯಿಂದಲೇ ವಾಂತಿ, ಭೇದಿಯಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಂತೆಬೆನ್ನೂರು ಆಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಜನ ಚಿಕಿತ್ಸೆ ಪಡೆದಿದ್ದಾರೆ. ಕೆಲವರು ಹೊಳಲು, ರಾಣೆಬೆನ್ನೂರು, ಹೂವಿನಹಡಗಲಿ ಆಸ್ಪತ್ರೆಗಳಿಗೆ ಸೇರಿದ್ದಾರೆ. 20 ದಿನಗಳ ಹಿಂದೆ ಇದೇ ರೀತಿಯ ಘಟನೆ ನಡೆದಿತ್ತು. ಗ್ರಾಮಕ್ಕೆ ಭೇಟಿ ನೀಡಿದ ಆರೋಗ್ಯ ಇಲಾಖೆ ತಂಡ ಗ್ರಾಮದ ಎರಡು ಬೋರ್‌ವೆಲ್‌ಗಳ ನೀರಿನ ಸ್ಯಾಂಪಲ್ ಸಂಗ್ರಹಿಸಿ ಕುಡಿಯಲು ಯೋಗ್ಯವಲ್ಲ ಎಂದು ವರದಿ ಕೊಟ್ಟಿದ್ದರೂ ಗ್ರಾಪಂ ಅದೇ ನೀರನ್ನು ಸರಬರಾಜು ಮಾಡಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net