

ಹೂವಿನಹಡಗಲಿ: ಪಟ್ಟಣದ ಪುರಸಭೆ ಅಧ್ಯಕ್ಷೆಯಾಗಿ ಜಮಲಾಬಿ ಹಾಗೂ ಉಪಾಧ್ಯಕ್ಷರಾಗಿ ಸೊಪ್ಪಿನ ಮಂಜುನಾಥ ಅವಿರೋಧವಾಗಿ ಗುರುವಾರ ಆಯ್ಕೆಯಾದರು. ಈ ಮೂಲಕ ಪುರಸಭೆ ಆಡಳಿತ ಮೊದಲ ಬಾರಿಗೆ ಬಿಜೆಪಿ ಪಾಲಾಗಿದೆ.
ಗುರುವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಏಳು ಜನ ಸದಸ್ಯರು ಗೈರಾಗಿದ್ದರು. ಚುನಾವಣಾಧಿಕಾರಿ, ತಹಸೀಲ್ದಾರ್ ಸಂತೋಷ್ ಕುಮಾರ್ ಆಯ್ಕೆ ಪ್ರಕಟಿಸಿದರು. ಅಧ್ಯಕ್ಷೆ ಘಂಟಿ ಜಮಲಾಬಿ ಮಾತನಾಡಿ, ನಾನು ಕಾಂಗ್ರೆಸ್‌ನಿಂದ ಪುರಸಭೆ ಸದಸ್ಯೆಯಾಗಿ ಆಯ್ಕೆಯಾಗಿದ್ದೆ. ಆದರೆ, ಮತದಾರರಿಗೆ ನ್ಯಾಯ ಒದಗಿಸಲಾಗದ ಹಿನ್ನೆಲೆಯಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದೇನೆ ಎಂದರು.
ಶಾಸಕ ಕೃಷ್ಣನಾಯ್ಕ ಮಾತನಾಡಿ, ಕಾಂಗ್ರೆಸ್ ದುರಾಡಳಿತದಿಂದ ಬೇಸರಗೊಂಡು 10 ಜನ ಕಾಂಗ್ರೆಸ್ ಸದಸ್ಯರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ ಎಂದು ತಿಳಿಸಿದರು. ಪುರಸಭೆ ಮುಖ್ಯಾಧಿಕಾರಿ ಇಮಾಮ್ ಸಾಹೇಬ್ ಇತರರಿದ್ದರು.