ಶಿವನಕಟ್ಟೇಶ್ವರ ಸ್ವಾಮಿ ರಥೋತ್ಸವ ಸಂಪನ್ನ

160223 Sovenahalli Ratostava
ಹೂವಿನಹಡಗಲಿ ತಾಲೂಕಿನ ಸೋವೇನಹಳ್ಳಿ ಗ್ರಾಮದ ಶ್ರೀ ಶಿವನಕಟ್ಟೇಶ್ವರ ರಥೋತ್ಸವ ಬುಧವಾರ ಸಂಜೆ ಜರುಗಿತು.
Published on

ಹೂವಿನಹಡಗಲಿ: ತಾಲೂಕಿನ ಸೋವೇನಹಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಶ್ರೀ ಶಿವನಕಟ್ಟೇಶ್ವರ ಸ್ವಾಮಿ ರಥೋತ್ಸವ ಸಂಭ್ರಮ, ಸಡಗರದಿಂದ ಜರುಗಿತು. ದೇವಸ್ಥಾನದಿಂದ ಮಂಗಳವಾದ್ಯಗಳ ಮೇಳದೊಂದಿಗೆ ಭವ್ಯ ಮೆರವಣಿಗೆಯ ಮೂಲಕ ಹೂವಿನ ಪಲ್ಲಕ್ಕಿಯಲ್ಲಿ ಸ್ವಾಮಿಯ ಉತ್ಸವ ಮೂರ್ತಿಯನ್ನು ಕರೆ ತಂದು ನಂತರ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಪುರದ ಅಭಿನವ ಸಿದ್ಧವೀರೇಶ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ರಥಕ್ಕೆ ಪೂಜೆ, ಮಹಾಮಂಗಳಾರತಿ ಸಲ್ಲಿಸಲಾಯಿತು. ಬಳಿಕ ಭಕ್ತರ ಹರ್ಷೋದ್ಗಾರದ ನಡುವೆ ರಥೋತ್ಸವ ನಡೆಯಿತು. ಭಕ್ತರು ರಥಕ್ಕೆ ಬಾಳೆಹಣ್ಣು ಸಮರ್ಪಿಸಿದ ಭಕ್ತಿ ಮೆರೆದರು.

ಜಾತ್ರೆಯ ಅಂಗವಾಗಿ ದೇವಸ್ಥಾನದಲ್ಲಿ ಬುಧವಾರ ಬೆಳಗ್ಗೆ ವಿಶೇಷ ಪೂಜೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು, ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು. ಈ ಬಾರಿಯ ಸ್ವಾಮಿಯ ಪಟಾಕ್ಷಿ ಆರ್.ಬಿ.ಪ್ರಕಾಶ್‌ಗೆ ಲಭಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net