ಶಿಬಾರ ಕಟ್ಟೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

sucide
Published on

ಹೂವಿನಹಡಗಲಿ: ತಾಲೂಕಿನ ಮೈಲಾರ ಗ್ರಾಮದ ಡೆಂಕಣಮರಡಿಯಲ್ಲಿನ ಶಿಬಾರಕಟ್ಟೆಯ ಕಬ್ಬಿಣದ ಸಲಾಕೆಗಳಿಗೆ ಲುಂಗಿಯಿಂದ ನೇಣು ಹಾಕಿಕೊಂಡು ವ್ಯಕ್ತಿಯೊಬ್ಬರು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹರಿಹರ ತಾಲೂಕು ಕುಂಬಳೂರು ಗ್ರಾಮದ ರಾಜಪ್ಪ ಮಡಿವಾಳ (48) ಮೃತ. ಶುಕ್ರವಾರ ಬೆಳಗ್ಗೆ ವ್ಯಕ್ತಿ ನೇಣು ಹಾಕಿಕೊಂಡಿರುವುದನ್ನು ಗಮನಿಸಿದ ಜನರು ಹಿರೇಹಡಗಲಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ರಾಜಪ್ಪ ಗ್ರಾಮದಲ್ಲಿನ ಸಂಬಂಧಿಕರ ಮನೆಗೆ ಬಂದಿದ್ದರು. ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net