ಮದಲಗಟ್ಟಿ ಆಂಜನೇಯಸ್ವಾಮಿ ರಥೋತ್ಸವ ಅದ್ದೂರಿ

Hadagali modalagatta Chariot Festival
ಹೂವಿನಹಡಗಲಿ ತಾಲೂಕಿನ ಸುಕ್ಷೇತ್ರ ಮದಲಗಟ್ಟಿ ಆಂಜನೇಯ ಸ್ವಾಮಿ ರಥೋತ್ಸವ ಭಾನುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
Published on

ಹೂವಿನಹಡಗಲಿ: ತಾಲೂಕಿನ ತುಂಗಭದ್ರಾ ನದಿ ತೀರದಲ್ಲಿರುವ ಸುಕ್ಷೇತ್ರ ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ ಭಾನುವಾರ ಸಂಜೆ ಸಹಸ್ರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ಆಂಜನೇಯ ಸ್ವಾಮಿಗೆ ಬೆಳಗ್ಗೆ ವಿಶೇಷ ಪೂಜೆ ನೆರವೇರಿಸಿದ ಬಳಿಕ ಅರ್ಚಕರು ಅಗ್ನಿಕುಂಡ ಪ್ರವೇರಿಸಿದರು. ನಂತರ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಸಕಲ ಮಂಗಳವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ರಥಾರೋಹಣ ಮಾಡಲಾಯಿತು. ಬಳಿಕ ಭಕ್ತರ ಜಯಘೋಷಗಳ ನಡುವೆ ರಥೋತ್ಸವ ಪಾದಗಟ್ಟೆವರೆಗೂ ಸಾಗಿ ಮೂಲಸ್ಥಾನಕ್ಕೆ ಮರಳಿತು. ನೆರೆದಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು, ಉತತ್ತಿ ಸಮರ್ಪಿಸುವ ಮೂಲಕ ಭಕ್ತಿ ಸಲ್ಲಿಸಿದರು.

ರಥೋತ್ಸವದಲ್ಲಿ ಬಳ್ಳಾರಿ, ವಿಜಯನಗರ, ಗದಗ, ಹಾವೇರಿ, ದಾವಣಗೇರಿ, ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಭಕ್ತಿ ಸಮರ್ಪಿಸಿದರು. ರಥೋತ್ಸವ ಅಂಗವಾಗಿ ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಪಂಚಾಮೃತ ಅಭಿಷೇಕ, ಮನ್ಯಸೂಕ್ತ ಹೋಮ ಜರುಗಿತು. ಅರ್ಚಕರು ವಾಯುಸ್ತುತಿ ಪುನಃಶ್ಚರಣ, ಅಷ್ಟೋತ್ತರ ನೆರವೇರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net