ಶಿಬಿರಗಳಿಂದ ಕೂಡಿ ಬಾಳುವ ವ್ಯಕ್ತಿತ್ವ - ಶಿವಯೋಗೀಶ್ವರ ಸ್ವಾಮೀಜಿ ಅಭಿಮತ

ಮಾಗಳ ಗ್ರಾಮದಲ್ಲಿ ಜಿಬಿಆರ್ ಕಾಲೇಜಿನ ಎನ್‌ಎಸ್‌ಎಸ್ ಶಿಬಿರವನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸಿ.ಮೋಹನ ರೆಡ್ಡಿ ಉದ್ಘಾಟಿಸಿದರು. ಅಂಗೂರೇಶ್ವ ಹಿರೇಮಠದ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ, ಪ್ರಾಚಾರ್ಯ ಎಸ್.ಎಸ್.ಪಾಟೀಲ್, ಎಸ್‌ಡಿಎಂಸಿ ಅಧ್ಯಕ್ಷೆ ಕೆ.ಮಮತಾ ಇತರರಿದ್ದರು.
ಮಾಗಳ ಗ್ರಾಮದಲ್ಲಿ ಜಿಬಿಆರ್ ಕಾಲೇಜಿನ ಎನ್‌ಎಸ್‌ಎಸ್ ಶಿಬಿರವನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸಿ.ಮೋಹನ ರೆಡ್ಡಿ ಉದ್ಘಾಟಿಸಿದರು. ಅಂಗೂರೇಶ್ವ ಹಿರೇಮಠದ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ, ಪ್ರಾಚಾರ್ಯ ಎಸ್.ಎಸ್.ಪಾಟೀಲ್, ಎಸ್‌ಡಿಎಂಸಿ ಅಧ್ಯಕ್ಷೆ ಕೆ.ಮಮತಾ ಇತರರಿದ್ದರು.
Published on

ಹೂವಿನಹಡಗಲಿ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಸೇವಾ ಭಾವನೆಯೊಂದಿಗೆ ದೇಸಿ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ಅಂಗೂರು ಅಂಗೂರೇಶ್ವ ಹಿರೇಮಠದ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲೂಕಿನ ಮಾಗಳ ಗ್ರಾಮದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಜಿಬಿಆರ್ ಕಾಲೇಜಿನಿಂದ ಆಯೋಜಿಸಿದ್ದ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಸೇವಾ ಶಿಬಿರದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಇಂದಿನ ಪಾಲಕರಲ್ಲಿ ಮಕ್ಕಳು ಹೆಚ್ಚಿನ ಅಂಕ ಗಳಿಸಬೇಕೆಂಬ ಭಾವನೆ ಬಲವಾಗಿದೆ. ಅದರಿಂದಾಗಿ ಕುಟುಂಬ ಮತ್ತು ಸಂಸ್ಕೃತಿಯಿಂದ ಅವರನ್ನು ದೂರವಿಡುತ್ತಿದ್ದಾರೆ. ನಮ್ಮ ಭಾರತೀಯ ಸಂಸ್ಕೃತಿಯನ್ನು ಉಳಿಸಿ, ಎಲ್ಲರೊಂದಿಗೆ ಕೂಡಿ ಬಾಳುವ ವ್ಯಕ್ತಿತ್ವವನ್ನು ಈ ರೀತಿಯ ಶಿಬಿರಗಳು ರೂಪಿಸುತ್ತವೆ ಎಂದರು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿ.ಮೋಹನ ರೆಡ್ಡಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರ ದೈನಂದಿನ ಜೀವನ ಚಿತ್ರಣ ಅರಿಯಲು, ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಸೇವಾ ಶಿಬಿರಗಳು ಸಹಕಾರಿಯಾಗಿವೆ ಎಂದರು. ಜಾನಪದ ಕಲಾವಿದ ಜೀವನಸಾಬ್ ವಾಲೀಕಾರ್ ಅವರಿಂದ ಸಾಂಸ್ಕೃತಿ ಕಾರ್ಯಕ್ರಮಗಳು ನಡೆದವು.

ಪ್ರಾಚಾರ್ಯ ಎಸ್.ಎಸ್.ಪಾಟೀಲ್, ಗ್ರಾಪಂ ಉಪಾಧ್ಯಕ್ಷ ವಿರೂಪಾಕ್ಷಪ್ಪ ಯಳಮಾಲಿ, ಎಸ್‌ಡಿಎಂಸಿ ಅಧ್ಯಕ್ಷೆ ಕೆ.ಮಮತಾ, ಶಿಬಿರಾಧಿಕಾರಿ ಡಾ.ಶರಣಪ್ಪ ಜಕ್ಕಲಿ, ಮುಖ್ಯಗುರು ಡಿ.ವಿರೂಪಣ್ಣ, ಕೆ.ಮಾಬುಸಾಬ್ ಪ್ರಿಯಾಂಕ, ವಿದ್ಯಾರ್ಥಿಗಳು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net