ಯುವಪೀಳಿಗೆಗೆ ಇತಿಹಾಸ ತಿಳಿಯಲಿದೆ

11082202 huvin hadagali
Published on

ಹೂವಿನಹಡಗಲಿ: ಪ್ರತಿಯೊಬ್ಬರೂ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಹರ್ ಘರ್ ತಿರಂಗಾವನ್ನು ಯಶಸ್ವಿಗೊಳಿಸುವುದರಿಂದ ಯುವಪೀಳಿಗೆಗೆ ಇತಿಹಾಸ ತಿಳಿಯಲಿದೆ ಎಂದು ಹೂವಿನಹಡಗಲಿ ತಹಸೀಲ್ದಾರ್ ಶರಣಮ್ಮ ಹೇಳಿದರು.
ಪಟ್ಟಣದಲ್ಲಿ ಗುರುವಾರ ಜಿ.ಬಿ.ಆರ್ ಕಾಲೇಜು ಮತ್ತು ತಾಲೂಕು ಆಡಳಿತ ಸಹಯೋಗದಲ್ಲಿ ಶ್ರಮದಾನ ಮತ್ತು ನಗರದ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸ್ವಾತಂತ್ರ್ಯೋತ್ಸವ ಜಾಗೃತಿ ಜಾಥಾಕ್ಕೆ ಸಸಿ ನೆಡುವುದರ ಮೂಲಕ ಜಾಥಾಕ್ಕೆ ಚಾಲನೆ ನೀಡಿ, ಮಾತನಾಡಿದರು.
75ನೇ ಸ್ವಾತಂತ್ರ ದಿನಾಚರಣೆಯನ್ನು ದೇಶದೆಲ್ಲೆಡೆ ಆಚರಿಸುತ್ತಿದ್ದು, ದೇಶಕ್ಕಾಗಿ ಹೋರಾಟ ಮಾಡಿದ ಹೋರಾಟಗಾರರನ್ನು ಸ್ಮರಿಸಲಾಗುವುದು. ಈ ನಿಟ್ಟಿನಲ್ಲಿ ತಾಲೂಕಿನ ಎಲ್ಲ ಅಧಿಕಾರಿಗಳು ಮತ್ತು ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ ಎಂದರು. ಜಾಥಾ ನಡೆದ ನಂತರ ಜಿಬಿಆರ್ ಕಾಲೇಜು ಆವರಣ ಮತ್ತು ನಗರದ ರಸ್ತೆಗಳನ್ನು ವಿದ್ಯಾರ್ಥಿಗಳು ಸ್ವಚ್ಛಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net