ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುವೆ

hddddd
Published on

ಚನ್ನಪಟ್ಟಣ: ನಾನು ಕೊನೇ ಉಸಿರು ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಘೋಷಣೆ ಮಾಡಿದರು.

ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡಿ ಮಾತನಾಡಿ, ಮೇಕೆದಾಟು ಯೋಜನೆ ಆಗುತ್ತೆ ಎಂದರೆ ಅದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಇದರಲ್ಲಿ ಎರಡು ಮಾತಿಲ್ಲ. ನಾನು ಅವರಿಗೆ ಮನವಿ ಮಾಡುತ್ತೇನೆ. ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡುತ್ತೇನೆ ಎಂದರು.

ಸಿದ್ದರಾಮಯ್ಯ ಬಳಿ ನೀವು ಕೇಳಿ. ಆಲಮಟ್ಟಿ, ಹಾರಂಗಿ, ಹೇಮಾವತಿ, ಯಗಚಿ ಅಣೆಕಟ್ಟು ಕಟ್ಟಿದವರು ಯಾರು? ಬರೀ ಇಗ್ಗಲೂರು ಡ್ಯಾಮ್ ಅಷ್ಟೇ ಅಲ್ಲ. ನಿಮ್ಮನ್ನು ನಾನು ನೋಡುತ್ತಿದ್ದರೆ 92 ವರ್ಷದ ನನಗೆ 18ರ ಶಕ್ತಿ ಬರುತ್ತದೆ. ಇನ್ನೂ ನಾಲ್ಕಾರು ವರ್ಷ ಬದುಕಿರುತ್ತೇನೆ ಎಂದರು.

ಹಿಮಾಲಯ ಪರ್ವತಕ್ಕೂ ಇಲ್ಲಿನ ಸಣ್ಣ ಗುಡ್ಡಕ್ಕೂ ಎಲ್ಲಿಯ ಹೊಲಿಕೆ. ಒಂದು ಶಾಲೆ ಮಾಡಲು ಜಾಗ ಕೇಳಿದರೆ ದುಡ್ಡು ದುಡ್ಡು ಅಂತಾರೆ ಎಂದು ಮಾಜಿ ಪ್ರಧಾನಿ ಗುಡುಗಿದರು. ನಿಖಿಲ್ನನ್ನು ನಾನೇ ರಾಜ್ಯ ನಾಯಕನನ್ನಾಗಿ ಮಾಡ್ತೇನೆ. ತೋಟದಲ್ಲಿ ಕುಳಿತು ಹೇಳಿಕೊಟ್ಟು ರಾಜ್ಯ ನಾಯಕನನ್ನಾಗಿ ಮಾಡುವ ಕಾಲ ಬರಲಿದೆ. ಅವನನ್ನು ದೊಡ್ಡ ನಾಯಕನನ್ನಾಗಿ ರೂಪಿಸುತ್ತೇನೆ ಎಂದರು.

"ಯಾರಾದರೂ ಕಣ್ಣೀರು ಹಾಕಿದರೆ ಅಣಕಿಸಬಾರದು. ತಾಯಿ ಭಾವನೆ ಇದ್ದವರಿಗೆ ಮಾತ್ರ ಕಣ್ಣಿರು ಬರುತ್ತದೆ. ಏನೋ ಟೀಕೆ ಮಾಡಬಾರದು. ಮಾತೃ ಹೃದಯ ಇದ್ದವರಿಗೆ ಮಾತ್ರ ಕಣ್ಣೀರು ಬರುತ್ತದೆ. ಎಲ್ಲರಿಗೂ ಒಂದು ಅವಕಾಶ ಕೊಟ್ಟಿದ್ದೀರಿ. ನಿಖಿಲ್ ಕುಮಾರಸ್ವಾಮಿಗೂ ಒಂದು ಅವಕಾಶ ಕೊಡಿ."

ತಾರಾ, ನಟಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net