ಹೆಸರು ಬದಲಾವಣೆ ನನಗೆ ಗೊತ್ತೇ ಇಲ್ಲ ಸಚಿವ ರಾಮಲಿಂಗರೆಡ್ಡಿ

ramalinga reddy
Published on

ರಾಮನಗರ: ಜಿಲ್ಲೆಯ ಹೆಸರನ್ನು ಬದಲಾಯಿಸುವ ನಿಟ್ಟಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಎಚ್ ಡಿ.ಕುಮಾರಸ್ವಾಮಿ ನಡುವೆ ಬಿಗ್ ಫೈಟ್ ಆರಂಭಗೊಂಡಿರುವ ನಡುವೆಯೇ, ಈ ವಿಚಾರ ನನಗೆ ಗೊತ್ತೇ ಇಲ್ಲ ಎನ್ನುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗರೆಡ್ಡಿ ಜಾಣ ನಡೆ ಪ್ರದರ್ಶನ ಮಾಡಿದ್ದಾರೆ.

ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮರುನಾಮಕರಣದ ವಿಚಾರ ನನಗೆ ಗೊತ್ತಿಲ್ಲ. ನನಗೆ ವೈಯಕ್ತಿಕವಾಗಿ ಡಿಕೆಶಿ ಸಿಕ್ಕಿಲ್ಲ, ಚರ್ಚೆ ಮಾಡಿಲ್ಲ. ಹೆಸರು ಬದಲಾವಣೆ ಮಾಡುವುದರಿಂದ ಯಾವುದೇ ತೊಂದರೆ ಇಲ್ಲ.  ನಷ್ಟ ಆಗಲ್ಲ. ಜೊತೆಗೆ ಜಿಲ್ಲೆಗೆ ಹೆಚ್ಚಿನ ಅನುದಾನ, ಮೂಲಭೂತ ಸೌಕರ್ಯಗಳು ಸಿಗಬೇಕು. ಆ ಉದ್ದೇಶದಿಂದ ಬದಲಾವಣೆ ಆದರೆ ತೊಂದರೆ ಇಲ್ಲ ಎಂದರು.

ಇದಕ್ಕೆ ದನಿ ಗೂಡಿಸಿದ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ, ಮರುನಾಮಕರಣ ಮಾಡಿದ್ರೆ ಏನಾಗುತ್ತೆ.? ಉಪವಾಸ ಮಾಡೋದು, ಬಿಡೋದು ಅವರಿಗೆ ಬಿಟ್ಟಿದ್ದು. ಸುಮ್ಮನೆ ಏನೇನೋ ಮಾತನಾಡ್ತಾರೆ ಬಿಡಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net