78 ವರ್ಷವಾದರೂ ಗಟ್ಟಿಯಾಗಿದ್ದೇನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Siddaramaiah
Published on

ಮೈಸೂರು: ಕ್ಯಾನ್ಸರ್ ಬಂದರೆ ಜೀವನ ಮುಗಿಯಿತು ಎಂದು ಅಂದುಕೊಳ್ಳಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಉದ್ಘಾಟಿಸಿ ಮಾತನಾಡಿ, ನಾನು 2000ನೇ ಇಸವಿಯಲ್ಲಿ ಆಂಜಿಯೋಪ್ಲ್ಯಾಸ್ಟಿ ಮಾಡಿಸಿಕೊಂಡಿದ್ದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಿಕೊಂಡು 25 ವರ್ಷಗಳು ಆಗಿದ್ದು, ಕನಿಷ್ಠ ಇನ್ನೂ 25 ವರ್ಷ ಬದುಕುತ್ತೇನೆ. ಆ.3 ಬಂದರೆ 78 ವರ್ಷ ತುಂಬುತ್ತದೆ. ನಾನು 78 ವರ್ಷದ ಥರ ಇದ್ದೇನಾ? ಇನ್ನೂ ಗಟ್ಟಿಯಾಗಿ ಇದ್ದೇನೆ. ನಾವು ಮಾನಸಿಕವಾಗಿ ಎಷ್ಟು ಗಟ್ಟಿಯಾಗಿ ಇದ್ದಷ್ಟು ನಮ್ಮ ಆಯುಷ್ಯ ವೃದ್ಧಿಯಾಗುತ್ತದೆ. ನನ್ನ ಆಯುಷ್ಯ ಮುಗಿಯಿತು ಅಂದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net