ನಾನು ಮತ್ತು ಡಾ.ಎಚ್.ಸಿ.ಮಹದೇವಪ್ಪ ಸೇರಿ ಮೈಸೂರು ಮತ್ತು ಬೆಂಗಳೂರು ನಡುವಿನ 10 ಪಥ ರಸ್ತೆ ಮಾಡಿಸಿದ್ದು: ಸಿದ್ದರಾಮಯ್ಯ

Siddaramaiah
Published on

ಮೈಸೂರು: ನಮ್ಮ ಸರ್ಕಾರ ಇರುವಾಗ ಮೈಸೂರು ನಗರಕ್ಕೆ ಅಗತ್ಯ ಇರುವ ಎಲ್ಲ ನೆರವನ್ನೂ ಒದಗಿಸುತ್ತೇವೆ. ಪಾರಂಪರಿಕ ನಗರದ ಹೆಮ್ಮೆಯನ್ನು ನಾವು ಉಳಿಸುತ್ತೇವೆ. ಮೈಸೂರು ಜಿಲ್ಲೆಯ ಜನರ ಋಣ ತೀರಿಸಲು ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಿಮ್ಮ ಆಶೀರ್ವಾದ ಇರಲಿ. ಕೆಲವರು ಸುಮ್ಮನೆ ಬುರುಡೆ ಬಿಡುತ್ತಾರೆ. ನಾನು ಮತ್ತು ಡಾ.ಎಚ್.ಸಿ.ಮಹದೇವಪ್ಪ ಸೇರಿ ಮೈಸೂರು ಮತ್ತು ಬೆಂಗಳೂರು ನಡುವಿನ 10 ಪಥ ರಸ್ತೆ ಮಾಡಿಸಿದ್ದೆವು. ಆದರೆ, ಬೇರೆಯವರು ನಾವು ಮಾಡಿಸಿದ್ದೆಂದು ಸುಳ್ಳು ಹೇಳುತ್ತಾರೆ. ಸುಳ್ಳು ಹೇಳುವವರು ಸಮಾಜಕ್ಕೆ ಮಾರಕ. ಅವರನ್ನು ನಂಬಬೇಡಿ ಎಂದು ಪರೋಕ್ಷವಾಗಿ ಸಂಸದ ಪ್ರತಾಪ್ ಸಿಂಹಗೆ ಟಾಂಗ್ ನೀಡಿದರು.

ಮೈಸೂರಿಗೆ ಜಿಲ್ಲಾ ಆಸ್ಪತ್ರೆ, ಜಯದೇವ, ಟ್ರಾಮಾ ಸೆಂಟರ್, ಕಿದ್ವಾಯಿ ಆಸ್ಪತ್ರೆ ಕೊಟ್ಟಿದ್ದು ನಾನೇ. ಈಗಾಗಲೇ 40 ಕೋಟಿ ರೂ. ಅನುದಾನ ಕೊಟ್ಟಿದ್ದೇವೆ. ಇನ್ನೂ 50 ಕೋಟಿ ರೂ. ಕೊಡ್ತೀವಿ. ನೆಪ್ರೋಲಜಿ ಕೇಂದ್ರ ಬೇಕು ಎನ್ನುವ ಬೇಡಿಕೆಯೂ ಇದೆ. ಅದನ್ನೂ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಡಾ.ಯತೀಂದ್ರ ಅವರ ಕೋರಿಕೆಯಂತೆ ಮೈಸೂರಿನಲ್ಲಿ ಬೋನ್‌ಮ್ಯಾರೋ ಚಿಕಿತ್ಸಾ ಸೌಲಭ್ಯ ಒದಗಿಸುತ್ತೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net