

ಬೇಲೂರು: ಆಶ್ರಯ ಯೋಜನೆಯಲ್ಲಿ ಕಾಲೇಜು ಹಿಂಭಾಗದ ಗುಡಿಸಲು ವಾಸಿಗಳನ್ನು ಸ್ಥಳಾಂತರಿಸಲು 5 ಎಕರೆ ಜಮೀನು ಖರೀದಿ ಮಾಡಲಾಗಿತ್ತು. ಆದರೆ, ಅಧಿಕಾರಿಗಳ ಕುಮ್ಮಕ್ಕಿಂದ ಕೆಲವರು ಕೋರ್ಟ್‌ಗೆ ಹೋಗಿದ್ದರಿಂದ ನನೆಗುದಿಗೆ ಬಿದ್ದಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಬೇಸರ ವ್ಯಕ್ತಪಡಿಸಿದರು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪಟ್ಟಣದ ಡಾ.ಅಂಬೇಡ್ಕರ್ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಮಾಧ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರ ಬೇಲೂರು ಪುರಸಭೆ ವ್ಯಾಪ್ತಿಯ ಅಭಿವೃದ್ಧಿಗೆ ಅನುದಾನ ಕೊಟ್ಟಿಲ್ಲ. ಇರುವ ಹಣ ಉಪಯೋಗಿಸಲು ಸಾಧ್ಯವಾಗುತ್ತಿಲ್ಲ. ಪಟ್ಟಣದ ಕೆಂಪೇಗೌಡ ರಸ್ತೆ ವಿಸ್ತರಣೆ ಮೂಲಕ ಹಾಗೂ ಅಂಬೇಡ್ಕರ್ ವೃತ್ತದಿಂದ ಕ್ರೀಡಾಂಗಣದವರೆಗೆ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಹೆಚ್ಚು ಸಹಕಾರ ನೀಡಲಾಗುವುದು ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಬಿ.ಮದನ್‌ಗೌಡ, ಮಾಜಿ ಶಾಸಕ ಕೆ.ಎಸ್.ಲಿಂಗೇಶ್, ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್ ಮಾತನಾಡಿದರು.
ಪತ್ರಕರ್ತರಾದ ರವಿಹೊಳ್ಳ, ದಿನೇಶ ಬೆಳ್ಳವಾರ, ಎಂ.ರಮೇಶ್, ಸುನೀಲ್, ಬಿ.ಕೆ.ರಮೇಶ್, ಬಿ.ಆರ್.ಮಹೇಶ್, ವಿತರಕರಾದ ಸಚಿನ್, ಪ್ರವೀಣಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಪುರಸಭೆ ಅಧ್ಯಕ್ಷೆ ಉಷಾ, ತಹಸೀಲ್ದಾರ್ ಶ್ರೀಧರ ಕಂಕನವಾಡಿ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ, ಪತ್ರಕರ್ತರ ಸಂಘದ ಅಧ್ಯಕ್ಷ ರಘುನಾಥ್, ಜಿಲ್ಲಾ ಉಪಾಧ್ಯಕ್ಷ ಮೋಹನ್ ಕುಮಾರ್, ಪಿಎಸ್‌ಐ ಶಿವನಗೌಡ ಪಾಟೀಲ್, ಪತ್ರಕರ್ತರ ಸಂಘದ ಕಾರ್ಯದರ್ಶಿ ಶಿವರಾಜ್, ಹೆಬ್ಬಾಳು ಹಾಲಪ್ಪ, ಮಲ್ಲೇಶ, ಎನ್.ಅನಂತು, ಲಕ್ಷ್ಮಣ್, ರಾಘವೇಂದ್ರ ಹೊಳ್ಳ, ವೆಂಕಟೇಶ್, ಭಾರತೀಗೌಡ, ಕುಮಾರ್, ಗಣೇಶ, ವಿಜಯ್ ಕುಮಾರ್, ಲೋಹಿತ ಇತರರು ಇದ್ದರು.