ಮುಡಾ ಹಗರಣದಲ್ಲಿ ನನ್ನ ಪಾತ್ರವಿಲ್ಲ: ಡಾ. ಯತೀಂದ್ರ ಸಿದ್ದರಾಮಯ್ಯ

Yathindra Siddaramaiah
Published on

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ರಾಜಕೀಯ ದುರುದ್ದೇ ಶದಿಂದ ನನ್ನ ಹೆಸರು ಎಳೆದು ತರಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಗರಣದ ಕುರಿತು ಈಗಾಗಲೇ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸ್ಪಷ್ಟನೆ ನೀಡಿದ್ದಾರೆ. ಹಗರಣದ ಕುರಿತು ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ. ಸುಮ್ಮನೆ ಆರೋಪ ಮಾಡಿ ಇಮೇಜ್ ಡ್ಯಾಮೇಜ್ ಮಾಡಲು ಪ್ರಯತ್ನ ನಡೆಸುತ್ತಿರುವುದು ನೀಚ ಕೆಲಸ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸಹ ಮುಡಾ ಸದಸ್ಯರಾಗಿದ್ದಾರೆ. ಹಾಗಾಗಿ ಅವರು ಹಗರಣದ ಕುರಿತು ಯಾವ ದಾಖಲೆಗಳನ್ನು ಬೇಕಾದರೂ ತೆಗೆದುಕೊಂಡು ಪರಿಶೀಲಿಸಲಿ. ಈ ಹಗರಣ ಬಿಜೆಪಿ ಕಾಲದಲ್ಲೇ ನಡೆದಿದೆ. ಎಲ್ಲ ಮಾಹಿತಿ ಹೊರಗೆ ಬರಲಿದ್ದು, ಜನರೇ ತೀರ್ಮಾನ ಮಾಡುತ್ತಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net