ನಾನು ಯಾರ ಫೋನ್ ಕೂಡ ಟ್ಯಾಪ್ ಮಾಡಿಸಿಲ್ಲ

HDK
Published on

ಮೈಸೂರು: ಸ್ವಾಮೀಜಿ ಅವರ ಫೋನನ್ನು ನಾನೇಕೆ ಟ್ಯಾಪ್ ಮಾಡಲಿ? ಅವರ ಮೇಲೆ ಅನುಮಾನ ಇದ್ದಿದ್ದರೆ ಅವರ ಜತೆ ಏಕೆ ನಾನು ಅಮೆರಿಕಕ್ಕೆ ಹೋಗುತ್ತಿದ್ದೆ? ಸರ್ಕಾರ ಬೀಳಲಿದೆ ಎಂದು ನನಗೆ ಯಾರೂ ಹೇಳಿರಲಿಲ್ಲ. ನೀವು ಆರಾಮಾವಾಗಿ ಹೋಗಿ ಬನ್ನಿ ಎಂದು ಹೇಳಿ ಕಳುಹಿಸಿದರು. ನಾನು ಯಾರ ಫೋನ್ ಕೂಡ ಟ್ಯಾಪ್ ಮಾಡಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಮೈತ್ರಿ ಸರ್ಕಾರ ಶುರುವಾದ 15 ದಿನಕ್ಕೆ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ನಡುವೆ ಯಾರಿಗಾಗಿ ಕಲಹ ಆರಂಭವಾಯಿತು? ಸರ್ಕಾರ ರಚನೆಯಾದ ಆರಂಭದಲ್ಲೇ ಅವರಿಬ್ಬರ ನಡುವೆ ಏಕೆ ಕಲಹವಾಯಿತು? ನನ್ನ ಮೇಲೆ 150 ಕೋಟಿ ರೂ. ಲಂಚ ಪಡೆದ ಆರೋಪ ಮಾಡಿದ ಜನಾರ್ದನ ರೆಡ್ಡಿ ಬಗ್ಗೆಯೇ ನಾನು ತಲೆಕೆಡಿಸಿಕೊಳ್ಳಲಿಲ್ಲ, ಇನ್ನು ಬೇರೆಯವರ ಫೋನ್‌ಗಳನ್ನು ನಾನೇಕೆ ಟ್ಯಾಪ್ ಮಾಡಲಿ ಎಂದು ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net