ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿರುವ ಐ.ಎಂ.ಜಯರಾಮ ಶೆಟ್ಟಿ

gan-4
Published on

ಕುಂದಾಪುರ: ಐ.ಎಂ.ಜಯರಾಮ ಶೆಟ್ಟಿ ಅವರು ವಿದ್ಯಾರ್ಥಿ ದಿನಗಳಲ್ಲಿ ವಿದ್ಯಾರ್ಥಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಅವರಲ್ಲಿದ್ದ ನಾಯಕತ್ವ ಗುಣಗಳಿಂದ ಶಾಸಕರಾಗಿ, ಸಂಸದರಾಗಿ ಸ್ಮರಣೀಯ ಕೆಲಸಗಳನ್ನು ಮಾಡಿ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಹುಟ್ಟೂರಿನಲ್ಲಿ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸಿ ಸಹಸ್ರಾರು ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದಾರೆ ಎಂದು ಕರ್ಣಾಟಕ ಬ್ಯಾಂಕ್ ಮಾಜಿ ನಿರ್ದೇಶಕ ಡಾ.ಎಚ್.ರಾಮಮೋಹನ್ ಹೇಳಿದರು.

ಮೂಡ್ಲಕಟ್ಟೆಯ ಐಎಂಜೆ ಇನ್‌ಸ್ಟಿಟ್ಯೂಶನ್ಸ್ ಆಶ್ರಯದಲ್ಲಿ ಮೂಡ್ಲಕಟ್ಟೆ ಐಎಂಜೆ ಕ್ಯಾಂಪಸ್‌ನಲ್ಲಿ ಗುರುವಾರ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮೂಡ್ಲಕಟ್ಟೆಯ ಐಎಂಜೆ ಇನ್‌ಸ್ಟಿಟ್ಯೂಶನ್ಸ್ ಮುಖ್ಯಸ್ಥ ಸಿದ್ಧಾರ್ಥ ಜೆ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಮತ್ತು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಅಧ್ಯಕ್ಷ ಭಾಸ್ಕರ ಕಾಮತ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಉಡುಪಿ ಸೆನ್ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ್ ಶುಭಾಶಂಸನೆ ಮಾಡಿದರು. ಮೂಡ್ಲಕಟ್ಟೆ ಎಂಎನ್‌ಬಿಎಸ್ ಟ್ರಸ್ಟ್ ಟ್ರಸ್ಟಿ ರಾಮ್ ರತನ್ ಶೆಟ್ಟಿ, ನಿರ್ದೇಶಕ ಸತ್ಯಜಿತ್, ರಾಮಕೃಷ್ಣ ಹೆಗ್ಡೆ, ಉಪ ಪ್ರಾಂಶುಪಾಲ ಮೆಲ್ವಿನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

ಎಂಐಟಿ ಪ್ರಾಂಶುಪಾಲೆ ಪ್ರತಿಭಾ ಪಾಟೀಲ್ ಸ್ವಾಗತಿಸಿದರು. ಉಪ ಪ್ರಾಂಶುಪಾಲೆ ರೂಪಶ್ರೀ ಮತ್ತು ಸುವರ್ಣ ರಾಣಿ ಅತಿಥಿಗಳನ್ನು ಪರಿಚಯಿಸಿದರು. ಪ್ರಾಧ್ಯಾಪಕಿ ಅರ್ಚನಾ ಸನ್ಮಾನ ಪತ್ರ ವಾಚಿಸಿದರು. ಸಹಾಯಕ ಪ್ರಾಧ್ಯಾಪಕಿ ರಕ್ಷಿತಾ ಅಡಿಗ ಕಾರ್ಯಕ್ರಮ ನಿರ್ವಹಿಸಿದರು. ನರ್ಸಿಂಗ್ ಕಾಲೇಜು ಪ್ರಾಂಶುಪಾಲ ಜೆನ್ನಿಫರ್ ಮಿನೇಜಸ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net